ಮೋದಿ-ರಾಹುಲ್ ವೈಚಾರಿಕ ಸಮರ: ಮಹೇಂದ್ರ ಜೋಶಿ
ಮಂಗಳೂರು: ದೇಶದಲ್ಲಿ ನಡೆಯುತ್ತಿರುವುದು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಿರೋಧವಲ್ಲ, ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಮಧ್ಯೆಯ ವೈಚಾರಿಕ ಸಮರ ಎಂದು ಸೇವಾದಳ ರಾಷ್ಟ್ರೀಯ ಮುಖ್ಯ ಸಂಘಟಕ ಮಹೇಂದ್ರ ಜೋಶಿ ಹೇಳಿದರು.
ಭಾನುವಾರ ಮಂಗಳೂರಿನ ಪಿಲಿಕುಳದ ಸ್ಕೌಟ್ ಭವನದಲ್ಲಿ 3 ದಿನಗಳ ದ.ಕ. ಜಿಲ್ಲಾ ಕಾಂಗ್ರೆಸ್ ಸೇವಾದಳ ಶಿಬಿರದ ಸಮಾರೋಪದಲ್ಲಿ ಭಾನುವಾರ ಅವರು ಮಾತನಾಡಿದರು.
ಜಾಹೀರಾತು ಏಜೆನ್ಸಿಯೊಂದು ಮೋದಿಯನ್ನು ವಿನಾಕಾರಣ ವೈಭವಿಕರಿಸುತ್ತಿದೆ. ಪ್ರಧಾನಿ ಸ್ವಾತಂತ್ರ್ಯೋತ್ಸವ ಭಾಷಣ ಮಾಡುವಾಗ ಅದಕ್ಕೆ ಪ್ರತ್ಯುತ್ತರ ನೀಡುವ ಕ್ರಮವಿಲ್ಲ. ಮೊನ್ನೆ ಮೋದಿ ಮಾತನಾಡಿದ್ದನ್ನು ಗಮನಿಸಿದರೆ ಅವರು ಪ್ರಧಾನಿ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಅಲ್ಲ ಎಂದು ಗೊತ್ತಾಗುತ್ತದೆ. ಪ್ರಧಾನಿಯಾಗಲು ರಾಹುಲ್ ಗಾಂಧಿ ಎಲ್ಲ ವಿಧದಲ್ಲೂ ಸಮರ್ಥರಿದ್ದಾರೆ ಎಂದರು.
ಕಾಂಗ್ರೆಸ್ನಲ್ಲಿ ಸೇವಾದಳಕ್ಕೆ ತನ್ನದೇ ಮಹತ್ವವಿದ್ದು, ಸಾಮಾಜಿಕ ಸಾಮರಸ್ಯಕ್ಕೆ ಒತ್ತು ನೀಡುತ್ತದೆ. ಚುನಾವಣೆ ವೇಳೆ ಮಾತ್ರವಲ್ಲ, ನಂತರವೂ ಸೇವಾದಳ ಸಕ್ರಿಯ ಚಟುವಟಿಕೆ ನಡೆಯಬೇಕು. ಸಾಮಾನ್ಯವಾಗಿ ಬೇರೆ ಪಕ್ಷಗಳು ಚುನಾವಣೆ ಬಂದಾಗ ಕಾರ್ಯಕರ್ತರನ್ನು ಗುಲಾಮರಂತೆ ಬಳಸಿ ನಂತರ ಮರೆತುಬಿಡುತ್ತಾರೆ. ಕಾಂಗ್ರೆಸ್ನಲ್ಲಿ ಈ ಸಂಸ್ಕೃತಿ ಇಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

