ಚಿನ್ನದಂಗಡಿಗೆ ಕನ್ನ: ಚಿನ್ನಾಭರಣ ಕಳವು
ಮಂಗಳೂರು: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಲಕ್ಷ್ಮೀ ಜುವೆಲ್ಲರಿಯಿಂದ ಭಾನುವಾರ ತಡರಾತ್ರಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸೊತ್ತು ಕಳವಾಗಿದೆ. ಜುವೆಲ್ಲರಿ ಮಾಲೀಕ ಶ್ರೀಧರ ಆಚಾರ್ಯ ಸೋಮವಾರ ಬೆಳಗ್ಗೆ ಅಂಗಡಿ ಬಾಗಿಲು ತೆರೆದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಭಾನುವಾರ ತಡರಾತ್ರಿ ಶೌಚಾಲಯ ಮೂಲಕ ಜುವೆಲ್ಲರಿಗೆ ಕಳ್ಳರು ಕನ್ನಹಾಕಿದ್ದಾರೆ. ಗ್ಯಾಸ್ಕಟ್ಟರ್ ಹಾಗೂ ಭಾರೀ ಗಾತ್ರದ ಆಕ್ಸಿಜನ್ ಸಿಲಿಂಡರ್ ಉಪಯೋಗಿಸಿ ಲಾಕರ್ ಮುರಿದಿದ್ದಾರೆ. ಬಳಿಕ ಅದರಲ್ಲಿದ್ದ ಚಿನ್ನಾಭರಣ ದೋಚಿದ್ದಾರೆ. ಆದರೆ ಕೃತ್ಯಕ್ಕೆ ಬಳಸಿದ ಪರಿಕರಗಳನ್ನು ಅಲ್ಲೇ ಬಿಟ್ಟಿದ್ದಾರೆ. ನಸುಕಿನ ಜಾವ 3.30ರ ಸುಮಾರಿಗೆ ಪೊಲೀಸರು ಗಸ್ತು ಮಾಡುತ್ತಿರುವುದು ಕಂಡು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಬಳಿ ಇದ್ದ ಚಿನ್ನಾಭರಣಗಳಿದ್ದ 2 ಚೀಲವನ್ನು ಹನುಮಂತ ದೇವಸ್ಥಾನ ಬಳಿಯ ಮನೆಗೆ ಬಿಸಾಡಿ ಪರಾರಿಯಾಗಿದ್ದಾರೆ. ಅದರಲ್ಲಿದ್ದ ಚಿನ್ನಾಭರಣವನ್ನು ಪೊಲೀಸರು ಠಾಣೆಗೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನದಳ ಕರೆಸಲಾಗಿದ್ದು, ಮೂಡುಬಿದಿರೆ ಇನ್ಸ್ಪೆಕ್ಟರ್, ನಗರ ಕಮಿಷನರೇಟ್ ಅಧಿಕಾರಿಗಳು ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ತಿಂಗಳ ಹಿಂದೆ ಮೂಡುಬಿದಿರೆ ಜೈನ ಬಸದಿ ಸೇರಿದಂತೆ ವಿವಿಧ ಬಸದಿಗಳಲ್ಲಿ ಕಳ್ಳತನ ಘಟನೆ ಮಾಸುವ ಮುನ್ನವೇ ಇನ್ನೊಂದು ಕಳ್ಳತನ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

