ಡಿಪ್ಲೋಮಾದಲ್ಲಿ ಕ್ಯಾರಿಓವರ್: ಸಚಿವ ದೇಶಪಾಂಡೆ ಸ್ಪಷ್ಟನೆ
ಬೆಂಗಳೂರು: ಡಿಪ್ಲೋಮಾದಲ್ಲಿ ನಾಲ್ಕಕ್ಕಿಂತ ಅಧಿಕ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರೆ ಕ್ಯಾರಿ ಓವರ್‌ಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಸ್ಪಷ್ಟಪಡಿಸಿದ್ದಾರೆ.
ಹೈಕೋರ್ಟ್‌ನ ಆದೇಶದ ಪ್ರಕಾರ ನಾಲ್ಕಕ್ಕಿಂತ ಹೆಚ್ಚಿನ ವಿಷಯಗಳು ಬಾಕಿ ಉಳಿದಿರುವಾಗ ಮುಂದಿನ ಸೆಮಿಸ್ಟರ್‌ಗೆ ಅವಕಾಶ ನೀಡುವುದು ಕಾನೂನು ಬಾಹಿರ. ಹೈಕೋರ್ಟ್ ತೀರ್ಪು ಪಾಲಿಸಿ ಪ್ರಸ್ತುತವಿರುವ ಕ್ಯಾರಿ ಓವರ್ ನಿಯಮವನ್ನು ಮುಂದುವರಿಸುವಂತೆ ಅಡ್ವೊಕೇಟ್ ಜನರಲ್ ಅವರು ಅಭಿಪ್ರಾಯ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಮುಂದಾಗದೆ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಬೇಕು ಎಂದು ವಿದ್ಯಾರ್ಥಿ ಸಂಘಟನೆಗಳಿಗೆ ಸಚಿವ ದೇಶಪಾಂಡೆ ಮನವಿಮಾಡಿದ್ದಾರೆ.
2011-12ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅನ್ವಯವಾಗುವಂತೆ ಹತ್ತು ವಿಷಯಗಳಲ್ಲಿ ಅನುತ್ತೀರ್ಣರಾದವರಿಗೆ ಕ್ಯಾರಿ ಓವರ್‌ಗೆ ಅವಕಾಶ ನೀಡಲಾಗಿತ್ತು. ಆ ಬಳಿಕ 2012-13ನೇ ಶೈಕ್ಷಣಿಕ ವರ್ಷಕ್ಕೆ ಇದನ್ನು 8 ವಿಷಯಗಳಿಗೆ ಇಳಿಸಲಾಯಿತು. ಆದರೆ ಇದನ್ನು ವಿದ್ಯಾರ್ಥಿಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ ಫಲವಾಗಿ 4 ವಿಷಯಗಳಿಗೆ ಇಳಿಕೆಯಾಗಿದೆ. ಕೋರ್ಟ್‌ನ ನಿಯಮ ಪಾಲಿಸಲೇಬೇಕಿದೆ. ಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಯಾವುದೆ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ನೆರವು: ಮಲ್ಲೇಶ್ವರ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಗಳಿಗೆ ಸರ್ಕಾರ ತಲಾ 1 ಲಕ್ಷ ಪರಿಹಾರ ಹಾಗೂ ಕಾಲೇಜುಗಳಲ್ಲಿ ಸೀಟು ಕೊಡಿಸಿದೆ. ರಕ್ಷಿತಾ ಸುಜಯ್ ಅವರಿಗೆ ಎಸ್‌ಕೆಎಸ್‌ಜೆಟಿಐ ಕಾಲೇಜಿನಲ್ಲಿ ಎಂಜಿನಿಯರಿಂಗ್ ಸೀಟು ನೀಡಲಾಗಿದೆ. ಲಿಶಾ ಅವರಿಗೆ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನಲ್ಲಿ ಬಿಸಿಎ ಓದಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

