ದಕ್ಷಿಣ ಕನ್ನಡ

25ರಂದು ಶಿವಮೊಗ್ಗದಲ್ಲಿ ಅಡಕೆ ಬೆಳೆಗಾರರ ಮಹತ್ವದ ಸಭೆ

Published On :

ಮಂಗಳೂರು: ಅಡಕೆಗೆ ಕೊಳೆರೋಗ ಸೇರಿದಂತೆ ಬೆಳೆಗಾರರ ವಿವಿಧ ಸಮಸ್ಯೆಗಳಿಗೆ ಸ್ಪಂದಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನ ಸೆಳೆಯಲು ಅಡಕೆ ಬೆಳೆಯುವ ಪ್ರದೇಶಗಳ ಸಮಿತಿ ವತಿಯಿಂದ ಆ.25ರಂದು ಶಿವಮೊಗ್ಗದಲ್ಲಿ ಮಹತ್ವದ ಸಭೆ ಕರೆಯಲಾಗಿದೆ ಎಂದು ಸಮಿತಿ ಮುಖಂಡ, ಮಾಜಿ ಸಚಿವ ನಾಗರಾಜ ಶೆಟ್ಟಿ ಹೇಳಿದರು.  ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಸಭೆಯಲ್ಲಿ ವಿವಿಧ ಬೆಳೆಗಾರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ, ಮಾಜಿ ಸಿಎಂ ಸದಾನಂದಗೌಡ, ಮುಖಂಡ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಮತ್ತಿತರರು ಪಾಲ್ಗೊಳ್ಳುವರು ಎಂದರು.
ಜಿಲ್ಲೆಯಲ್ಲಿ 3 ತಿಂಗಳಿಂದ ಸತತ ಮಳೆ ಸುರಿದಿರುವುದರಿಂದ ತೋಟಕ್ಕೆ ಔಷಧ ಸಿಂಪಡಿಸಲೂ ಸಾಧ್ಯವಾಗಿಲ್ಲ. ಇದರಿಂದ ಶೇ.60ಕ್ಕೂ ಅಧಿಕ ಫಸಲು ಹಾನಿಗೊಳಗಾಗಿದೆ. ಜಿಲ್ಲೆಯಲ್ಲಿ 30 ಸಾವಿರ ಹೆಕ್ಟೇರ್ ಅಡಕೆ ತೋಟವಿದ್ದು, ಹೇರಳ ಪ್ರಮಾಣದಲ್ಲಿ ಅಡಕೆ ಬೆಳೆಯಲಾಗುತ್ತಿದೆ. ಈಗಾಗಲೇ ಅಡಕೆ ಉತ್ಪನ್ನ ನಿಷೇಧಿಸದಂತೆ ಗುಜರಾತ್ ಹಾಗೂ ಮಹಾರಾಷ್ಟ್ರಕ್ಕೆ ಭೇಟಿ ನೀಡಿ ಅಲ್ಲಿನ ಸರ್ಕಾರವನ್ನು ವಿನಂತಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.