ರ್ಯಾಗಿಂಗ್: ಮೂವರು ವಿದ್ಯಾರ್ಥಿಗಳಿಗೆ ನ್ಯಾಯಾಂಗ ಬಂಧನ
ಸುಳ್ಯ: ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ಹಾಸ್ಟೆಲ್ನಲ್ಲಿ ನಡೆದ ರ್ಯಾಗಿಂಗ್ ಘಟನೆಗೆ ಸಂಬಂಧಿಸಿದಂತೆ ಬಂಧಿತರಾದ ಮೂವರು ವಿದ್ಯಾರ್ಥಿಗಳಿಗೆ ಸೆ.5ರವರೆಗೆ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ.
ಕಾಲೇಜಿನ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಮೈಸೂರು ಮೂಲದ ಪೃಥ್ವಿನ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು.
ನೀರು ತರಲು ಒತ್ತಾಯಿಸಿದಾಗ ತಾನು ನಿರಾಕರಿಸಿದ್ದಕ್ಕೆ ನನ್ನ ಮೇಲೆ ಗಂಭೀರ ಹಲ್ಲೆ ನಡೆಸಿರುವುದಾಗಿ ಭವನ್, ಗಣೇಶ್, ಕೌಶಿಕ್, ಕಾರ್ತಿಕ್, ಸಚಿನ್ ಮತ್ತು ಇತರರ ವಿರುದ್ಧ ಪೃಥ್ವಿನ್ ಸುಳ್ಯ ಪೊಲೀಸರಿಗೆ ದೂರು ನೀಡಿದ್ದನು. ತನಿಖೆ ನಡೆಸಿದ ಪೊಲೀಸರು ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ಇವರ ಪೈಕಿ ಪೃಥ್ವಿನ್ ಗುರುತಿಸಿದ ಹಿರಿಯ ವಿದ್ಯಾರ್ಥಿಗಳಾದ ಮಡಿಕೇರಿಯ ಕುಂಬಳದಾಳುವಿನ ಕೌಶಿಕ್, ಹಾಸನದ ದರ್ಶನ್ ಮತ್ತು ಚೆಟ್ಟಹಳ್ಳಿಯ ಭವನ್ನನ್ನು ಬುಧವಾರ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ವಿದ್ಯಾರ್ಥಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇತರೆ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಯತೀಶ್ ಮತ್ತು ಕಾರ್ತಿಕ್ ತಲೆಮರೆಸಿಕೊಂಡಿದ್ದಾರೆ.
ಆರೋಪಿಗಳ ಮೇಲೆ ಪೊಲೀಸರು ಐಪಿಸಿ ಮತ್ತು ಕರ್ನಾಟಕ ಶಿಕ್ಷಣ ಕಾಯ್ದೆಯ 149ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಡಿಬಾರ್ ಮಾಡಲಾಗಿದೆ.
ಘಟನೆಯ ವಿಷಯ ತಿಳಿದು ಮೈಸೂರಿನಿಂದ ಆಗಮಿಸಿದ ಪೃಥ್ವಿನ್ ಪೋಷಕರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ, ದೂರು ಹಿಂಪಡೆಯಲು ಬೆದರಿಕೆ ಒಡ್ಡಲಾಗಿದೆ. ರ್ಯಾಗಿಂಗ್ ನಡೆಸಿದ ಎಲ್ಲ ವಿದ್ಯಾರ್ಥಿಗಳನ್ನೂ ಬಂಧಿಲಿನೆಕ ಪೃಥ್ವಿನ್ ಪೋಷಕರು ಎಸ್ಪಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

