ನಾಳೆ ಗಂಗೊಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘ ಚುನಾವಣೆ
ಗಂಗೊಳ್ಳಿ: ಸ್ಥಳೀಯ ಗಂಗೊಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2013-2014ರಿಂದ 2017-2018ರವರೆಗಿನ ಐದು ವರ್ಷಗಳ ಅವಧಿಗೆ ಸಂಘದ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ 25ರಂದು ಗಂಗೊಳ್ಳಿಯ ಶ್ರೀ ರಾಮ ಮಂದಿರದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ತುಂತುರು ಮಳೆ
ಉಡುಪಿ: ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಹನಿಹನಿಮಳೆಯಾಗುತ್ತಿದ್ದು ಬಿಸಿಲಿನ ತಾಪಮಾನವು ಜಾಸ್ತಿಯಾಗಿದೆ. ಶುಕ್ರವಾರ ಜಿಲ್ಲೆಯಲ್ಲಿ ಮಧ್ಯಾಹ್ನದವರೆಗೆ ಬಿಸಿಲಿನ ವಾತವರಣವಿದ್ದು, ನಂತರಲ್ಲಿ ತುಂತುರು ಮಳೆಯಾಗಿದೆ. ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆವರೆಗೂ 11.46 ಮಿ.ಮಿ. ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ 2.8 ಮಿ.ಮಿ., ಕುಂದಾಪುರ ತಾಲೂಕಿನಲ್ಲಿ 20.0 ಮಿ.ಮಿ., ಕಾರ್ಕಳ ತಾಲೂಕಿನಲ್ಲಿ 11.4 ಮಿ.ಮಿ. ಮಳೆಯಾಗಿದೆ.
ಇಂಟರ್ಯಾಕ್ಟ್ ಪದಗ್ರಹಣ
ಉಡುಪಿ: ಇಲ್ಲಿನ ಪಡುಬೆಳ್ಳೆಯ ಶ್ರೀನಾರಾಯಣ ಗುರು ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಪ್ರೌಢ ಶಾಲೆಗಳ ಇಂಟರ್ಯಾಕ್ಟ್ ಕ್ಲಬ್ಗಳ ನೂತನ ಪದಾಧಿಕಾರಿಗಳ ಪದಗ್ರಹಣವನ್ನು ಶಿರ್ವ ರೋಟರಿ ಅಧ್ಯಕ್ಷ ಲಿಯೋ ನೊರೋನ್ನಾ ನೆರವೇರಿಸಿ ಪ್ರಮಾಣವಚನ ಬೋಧಿಸಿದರು. ಅತಿಥಿಗಳಾಗಿ ಶಾಲಾ ಸಮಿತಿ ಗೌರವ ಕಾರ್ಯದರ್ಶಿ ಶಿವಾಜಿ ಎಸ್. ಸುವರ್ಣ ಹಾಗೂ ರೋಟರಿ ವೃತ್ತಿಸೇವಾ ನಿದೇಶಕ ವಿಲಿಯಮ್ ಮಚಾದೊ ಭಾಗವಹಿಸಿದ್ದರು. ಶಾಲಾ ಆಡಳಿತಾಧಿಕಾರಿ ಜಿನರಾಜ್ ಜಿ. ಸಾಲ್ಯಾನ್, ಮುಖ್ಯ ಶಿಕ್ಷಕಿ ಉಷಾ ಕುಮಾರಿ, ಇಂಟರ್ಯಾಕ್ಟ್ ಶಿಕ್ಷಕ ಸುರೇಶ ನಾಯ್ಕ್, ಶಿಕ್ಷಕಿ ಸಂಗೀತಾ ಸಿ. ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

