ದಕ್ಷಿಣ ಕನ್ನಡ

ಜಿ.ಪಂ. ಸದಸ್ಯಗೆ ಜೀವ ಬೆದರಿಕೆ ಆರೋಪ: ಉದ್ಯಮಿ ರಾಕೇಶ್ ಮಲ್ಲಿ ವಿಚಾರಣೆ

Published On :

ಬಂಟ್ವಾಳ: ಜಿಲ್ಲಾ ಪಂಚಾಯಿತಿ ಸದಸ್ಯರೋರ್ವರಿಗೆ ಜೀವ ಬೆದರಿಕೆ ಒಡ್ಡಿದ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಉದ್ಯಮಿ ರಾಕೇಶ್ ಮಲ್ಲಿಯನ್ನು ಭಾನುವಾರ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿ, ಬಿಡುಗಡೆಗೊಳಿಸಿದ್ದಾರೆ.
ಕಳೆದ ಮೇಯಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭ ಜೀವ ಬೆದರಿಕೆ ಒಡ್ಡಿದ್ದ ಬಗ್ಗೆ ಜಿ.ಪಂ. ಸದಸ್ಯರೊಬ್ಬರು ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು.
ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಹಲವರನ್ನು ವಿಚಾರಣೆಗೆ ಗುರಿಪಡಿಸಿದ್ದರು, ಉದ್ಯಮಿ ರಾಕೇಶ ಮಲ್ಲಿ ವಿದೇಶದಲ್ಲಿ ಇದ್ದುದರಿಂದ ಅವರನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗಿರಲಿಲ್ಲ.
ಈ ನಡುವೆ ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಮಹೇಶ್ ಪ್ರಸಾದ್ ಅವರು ಮಲ್ಲಿ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂಲಕ ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಅಂತೆಯೇ ವಿದೇಶದಲ್ಲಿದ್ದ ರಾಕೇಶ್ ಮಲ್ಲಿ ಭಾನುವಾರ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆಯೇ ಏರ್‌ಪೋರ್ಟ್ ಅಧಿಕಾರಿಗಳು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಧಾವಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮಲ್ಲಿಯನ್ನು ವಶಕ್ಕೆ ತೆಗದುಕೊಂಡಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ ಅಪರಾಹ್ನ 2 ಗಂಟೆವರೆಗೆ ವಿಚಾರಣೆಗೆ ಗುರಿಪಡಿಸಲಾಗಿದೆ. ಆದರೆ, ಜೀವ ಬೆದರಿಕೆ ಒಡ್ಡಿದ ಬಗ್ಗೆ ಯಾವುದೇ ಸಾಕ್ಷ್ಯಗಳು ದೊರೆತಿಲ್ಲ ಎಂದು ಠಾಣಾಧಿಕಾರಿ ಮಹೇಶ್ ಪ್ರಸಾದ್ ತಿಳಿಸಿದ್ದಾರೆ.
ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ರಾಕೇಶ್ ಮಲ್ಲಿ ತಿಳಿಸಿದ್ದು, ತನಿಖೆ ಮುಗಿಯುವವರೆಗೆ ದೇಶಬಿಟ್ಟು ತೆರಳದಂತೆ ಸೂಚಿಸಿ, ಪಾಸ್‌ಪೋರ್ಟ್ ವಶಪಡಿಸಿಕೊಳ್ಳಲಾಗಿದೆ ಎಂದವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.