ದಕ್ಷಿಣ ಕನ್ನಡ

ಚಿನ್ನಾಭರಣ, ಗುಟ್ಕಾ ಸಾಗಾಟ ಪತ್ತೆ: ಇಬ್ಬರ ಸೆರೆ

Published On :

ಮಂಗಳೂರು: ದುಬೈನಿಂದ ಅಕ್ರಮವಾಗಿ ತರುತ್ತಿದ್ದ ಚಿನ್ನಾಭರಣ, ಸಿಗರೇಟು,್ತ ಗುಟ್ಕಾವನ್ನು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ದುಬೈನಿಂದ ಆಗಮಿಸಿದ ಅಬ್ದುಲ್ ರಹಿಮಾನ್ ಕುಂಞಯನ್ನು ತಪಾಸಣೆ ನಡೆಸಿದಾಗ, ರು. 4,23,850 ಮೌಲ್ಯದ 173 ಚಿನ್ನದ ಸರ ಪತ್ತೆಯಾಗಿತ್ತು. ದುಬಾರಿ ಬೆಲೆಯ 50 ಸಿಗರೇಟು ಪ್ಯಾಕ್, 5 ಸಾವಿರ ಗುಟ್ಕಾ ಪ್ಯಾಕೆಟ್ ಪತ್ತೆಯಾಯಿತು. ಗುರುವಾರ ಏರ್ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ದುಬೈನಿಂದ ಮಂಗಳೂರಿಗೆ ಆಗಮಿಸಿದ ಇನ್ನೊಬ್ಬ ಆರೋಪಿ ಕಾಸರಗೋಡು ಕೊಲ್ಲಂಬಾಡಿ ನಿವಾಸಿ ಅನ್ವರ್ ಸಾದತ್ ಬಳಿ 3.83 ಲಕ್ಷದ ಚಿನ್ನ ಪತ್ತೆಯಾಗಿತ್ತು.

ಸತ್ಯಾಗ್ರಹ 11ನೇ ದಿನಕ್ಕೆ; ಸೆ.1ರಂದು ಪ್ರತಿಭಟನೆ, ಬಂದ್ ಕರೆ
ಮಂಗಳೂರು: ಮಂಗಳೂರಿನ ಇಎಸ್ಐ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಕಾರ್ಮಿಕ ಮುಖಂಡ ಸುದತ್ ಜೈನ್ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಗುರುವಾರ 11ನೇ ದಿನ ತಲುಪಿದೆ. ಇದೇ ವೇಳೆ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷ್ಯ ವಹಿಸಿರುವುದನ್ನು ವಿರೋಧಿಸಿ ಸೆ.1ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ಕಾರ್ಮಿಕ ಸಂಘದ ಜಿಲ್ಲಾ ಘಟಕ ಪ್ರತಿಭಟನೆ ನಡೆಸಲಿದ್ದು, ಸೆ.2ರಂದು ಕಾರ್ಮಿಕರಿಂದ ಜಿಲ್ಲಾ ಬಂದ್ಗೆ ಕರೆ ನೀಡಿದೆ.  ಇಎಸ್ಐ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದು, ಇದನ್ನು ಕೇಂದ್ರ ಸುಪರ್ದಿಗೆ ತೆಗೆದುಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಆಸ್ಪತ್ರೆ ಎದುರು ಜೈನ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಗುರುವಾರದಿಂದ ಜೈನ್ ನೀರನ್ನೂ ತ್ಯಜಿಸಿದ್ದು, ಬೇಡಿಕೆ ಈಡೇರುವವರೆಗೆ ಸತ್ಯಾಗ್ರಹ ಮುಂದುವರಿಸುವುದಾಗಿ ಹೇಳಿದ್ದಾರೆ.  ಇವರ ಸತ್ಯಾಗ್ರಹ ಬೆಂಬಲಿಸಿ ತಾಲೂಕುಗಳಿಂದ ಕಾರ್ಮಿಕರು ಪಾದಯಾತ್ರೆ ನಡೆಸಿದ್ದು, ಇದರ ಮುಂದುವರಿದ ಭಾಗವಾಗಿ ಸೆ.1ರಂದು ಬೆಳಗ್ಗೆ 10.30ರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸುವರು ಎಂದು ಸಂಘದ ಗೌರವ ಅಧ್ಯಕ್ಷ ವಿಜಯ ಕುಮಾರ್ ಹೆಗ್ಡೆ ತಿಳಿಸಿದ್ದಾರೆ. 

ಜಂಬೆಗೆ ಶಿವರಾಮ ಕಾರಂತ ಬಾಲವನ ಪ್ರಶಸ್ತಿ
ಪುತ್ತೂರು: ಡಾ. ಶಿವರಾಮ ಕಾರಂತರ ಜನ್ಮ ದಿನಾಚರಣೆ ಅಂಗವಾಗಿ ನೀಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಖ್ಯಾತ ರಂಗ ನಿರ್ದೇಶಕ ಮತ್ತು ರಾಷ್ಟ್ರೀಯ ನಾಟಕ ಶಾಲೆ ದೆಹಲಿಯ ಬೆಂಗಳೂರು ಘಟಕದ ಸಂಯೋಜಕ ಚಿದಂಬರ ರಾವ್ ಜಂಬೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಾಲವನ ಸಮಿತಿ ಅಧ್ಯಕ್ಷ ಮತ್ತು ಪುತ್ತೂರು ಸಹಾಯಕ ಆಯುಕ್ತ ಎಚ್. ಪ್ರಸನ್ನ ತಿಳಿಸಿದ್ದಾರೆ. ಡಾ. ಕಾರಂತರ ಆಸಕ್ತಿಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಈಗಾಗಲೇ ಸಾಹಿತ್ಯ, ಯಕ್ಷಗಾನ ಮತ್ತು ಬಾಲ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ. ಆ.28ರಂದು ನಡೆದ ಬಾಲವನ ಸಮಿತಿ ಸಭೆಯಲ್ಲಿ ಜಂಬೆ ಅವರನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 10ರಂದು ಬಾಲವನದಲ್ಲಿ ನಡೆಯುವ ಡಾ. ಶಿವರಾಮ ಕಾರಂತರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.