ಸ್ಥಳೀಯ ವಾತಾವರಣ ಆಧರಿಸಿದ ಯೋಜನೆಗಳು ಯಶಸ್ವಿ: ಡಾ. ಹೆಗ್ಗಡೆ
ಬೆಳ್ತಂಗಡಿ: ಸ್ಥಳೀಯ ವಾತಾವರಣಕ್ಕನುಗುಣವಾಗಿ ರೂಪುಗೊಳ್ಳುವ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತವೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಗುರುವಾರ ಧರ್ಮಸ್ಥಳಲ್ಲಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ಬ್ಯಾಂಕರ್ಸ್ ಇನ್ಸಿಟ್ಯೂಟ್ ಆಫ್ ರೂರಲ್ ಡೆವಲೆಪ್ಮೆಂಟ್ ಹಮ್ಮಿಕೊಂಡಿದ್ದ ಜೆಎಲ್ಜಿಎಸ್ ರಚನೆಯ ಕುರಿತಾದ ಮೂರುದಿನಗಳ ತರಬೇತಿ ಉದ್ಘಾಟಿಸಿ ಮಾತನಾಡಿದರು.
ರಾಜಧಾನಿಗಳಲ್ಲಿ ರೂಪುಗೊಳ್ಳುವ ಗ್ರಾಮೀಣ ಅಭಿವೃದ್ಧಿ ಯೋಜನೆಗಳು ತಳಮಟ್ಟಕ್ಕೆ ಬಂದಾಗ ಇಲ್ಲಿನ ವಾಸ್ತವಿಕತೆಯೊಂದಿಗೆ ಹೊಂದಾಣಿಕೆಯಾಗದೆ ವಿಫಲವಾಗುತ್ತಿವೆ. ಯೋಜನೆಗಳು ಸ್ಥಳೀಯವಾಗಿಯೂ ರೂಪುಗೊಳ್ಳುವಂತಾದರೆ ಹೆಚ್ಚು ಯಾಸ್ವಿಯಾಗಲು ಸಾಧ್ಯವಿದೆ. ಪ್ರತಿಯೊಬ್ಬರನ್ನೂ ಸಶಕ್ತರನ್ನಾಗಿಸಬೇಕು ಎಂಬ ಗುರಿಯೊಂದಿಗೆ ಸ್ವಯಂ ಸೇವಾ ಸಂಸ್ಥೆಗಳು ಕಾರ್ಯನಿರ್ವಹಿಸಬೇಕಾಗಿದೆ ಎಂದ ಅವರು ಗ್ರಾಮೀಣ ಕೃಷಿಕರಿಗಾಗಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ರೂಪಿಸಿದ ಪ್ರಗತಿಬಂಧು ಒಕ್ಕೂಟಗಳು ಅತ್ಯಂತ ಯಶಸ್ವಿಯಾಗಿದೆ ಎಂದರು.
ವೇದಿಕೆಯಲ್ಲಿ ಜಯದೇವ್ ಶ್ರೀವಾಸ್ತವ, ಕೆ.ಎಲ್. ವಿನಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್ ಉಪಸ್ಥಿತರಿದ್ದರು.
ತರಬೇತಿ ಶಿಬಿರದಲ್ಲಿ ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನತಧಿಗಳು ಭಾಗವಹಿಸಿದ್ದಾರೆ. ಮಮತಾ ರಾವ್ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

