ದಕ್ಷಿಣ ಕನ್ನಡ

ಉರುಂಬಿ ಅಣೆಕಟ್ಟು ಯೋಜನೆ ಕೈಬಿಡಲು ಆಗ್ರಹಿಸಿ 4ರಂದು ಜಾಥಾ

Published On :

ಉಪ್ಪಿನಂಗಡಿ: ಜನವಿರೋಧಿ ಪರಿಸರ ಮಾರಕ ಉದ್ದೇಶಿತ ಉರುಂಬಿ ಅಣೆಕಟ್ಟು ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಪರಿಸರ ಜಾಗೃತಿ ಜಾಥಾ ಹಾಗೂ ರಾಜ್ಯಪಾಲರಿಗೆ ಯೋಜನೆಯ ರದ್ಧತಿಗೊಳಿಸುವ ಬಗ್ಗೆ ಕಾರ್ಡ್ ಚಳುವಳಿ, ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮ ಡಿ.4ರಂದು ನಡೆಯಲಿದೆ ಎಂದು ಕುಮಾರಧಾರ ಪರಿಸರ ಸಂರಕ್ಷಾಣಾ ಸಮಿತಿಯ ಅಧ್ಯಕ್ಷ ಕರುಣಾಕರ ಗೋಗಟೆ ಹೇಳಿದರು.
ಅವರು ಭಾನುವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈಗಾಗಲೇ ಯೋಜನೆಯ ಬಗ್ಗೆ ರೈತರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಆದರೂ ಯೋಜನೆ ಅನುಷ್ಠಾನಕ್ಕೆ ಹುನ್ನಾರ ನಡೆಸಲಾಗುತ್ತಿದೆ. ಆದರೆ ಇದಕ್ಕೆ ಅವಕಾಶ ನೀಡುವುದಿಲ್ಲ, ಈ ಹಿನ್ನೆಲೆಯಲ್ಲಿ ಈ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಕಡಬದಾದ್ಯಂತ ಸಭೆ ನಡೆದು ಸುಬ್ರಹ್ಮಣ್ಯದಲ್ಲಿ ಸಮಾರೋಪ ನಡೆಯಲಿದೆ ಎಂದರು.
ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಕಾರ್ಡ್ ಚಳುವಳಿ, ವಿವಿಧ ಗ್ರಾಪಂ ಹಾಗೂ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು.
ಜಾಥಾಕ್ಕೆ ಅಂದು ಬೆಳಗ್ಗೆ ಉರುಂಬಿಯಲ್ಲಿ ಪಶ್ಚಿಮಘಟ್ಟ ಕಾರ್ಯಪಡೆಯ ಪೂರ್ವಾಧ್ಯಕ್ಷ ಅನಂತ ಹೆಗಡೆ ಅಶೀಸರ ಚಾಲನೆ ನೀಡಲಿದ್ದಾರೆ. ಬಳಿಕ ಪದವು ಬಸ್ ತಂಗುದಾನದ ಬಳಿ ನಡೆಯುವ ಪ್ರಥಮ ಸಭೆಯಲ್ಲಿ ಪರಿಸರವಾದಿ ಅನಂತ ಹೆಗಡೆ ಅಸೀಸರ, ಜಿಪಂ ಸದಸ್ಯೆ ಆಶಾ ತಿಮ್ಮಪ್ಪ ಗೌಡ, ರಘುನಾಥ ನೈಕ್ ಭಾಗವಹಿಸಲಿದ್ದಾರೆ ಎಂದರು.
ಸಂಜೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಸುಬ್ರಹ್ಮಣ್ಯ ಮಠಾಧೀಶ ಶ್ರಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಕುಮಾರಧಾರ ಪರಿಸರ ಸಂರಕ್ಷಣಾ ಸಮಿತಿಯ ಪ್ರಮುಖರಾದ ರಘುನಾಥ ಹೆಬ್ಬಾರ್ ಹೊಸ್ಮಠ, ಕಿರಣ್ ಗೋಗಟೆ, ಡಾ. ರಾಜೇಶ್ ಬೀರಂತಡ್ಕ, ಮೋನಪ್ಪ ಗೌಡ ನಾಡೋಳಿ, ಯಾದವ ಬೀರಂತಡ್ಕ , ಎಲ್ಸಿ ತೋಮಸ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.