ಧರ್ಮಸ್ಥಳದಲ್ಲಿಂದು 81ನೇ ಸಾಹಿತ್ಯ ಸಮ್ಮೇಳನ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದ 5ನೇ ದಿನವಾದ ಸೋಮವಾರ ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಧಾರವಾಡದ ಖ್ಯಾತ ಸಾಹಿತಿ ವೀಣಾ ಶಾಂತೇಶ್ವರ ಅವರ ಅಧ್ಯಕ್ಷತೆಯಲ್ಲಿ 81ನೇ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಖ್ಯಾತ ಶಿಕ್ಷಣ ತಜ್ಜರೂ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಕೆ. ಚಿದಾನಂದ ಗೌಡ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಕಿರುತೆರೆ ನಟಿ ಮಾಳವಿಕ ಅವಿನಾಶ್, ಬೆಂಗಳೂರಿನ ಪತ್ರಕರ್ತ ಪ್ರೊ. ರವೀಂದ್ರ ರೇಷ್ಮೆ ಮತ್ತು ಚಿತ್ರದುರ್ಗದ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕಿ ತಾರಿಣಿ ಶುಭದಾಯಿನಿ ಅವರು ಸಾಹಿತ್ಯಕ ಉಪನ್ಯಾಸ ಮಾಡಲಿದ್ದಾರೆ.
ಬಳಿಕ ರಾತ್ರಿ 8.30ರಿಂದ ಚೆನ್ನೈ ಇಸ್ಯಾ ಪರೋಲಿಯ ಷಣ್ಮುಖ ಸಂಗೀತ ಶಿರೋಮಣಿ ಗಾಯತ್ರಿ ವೆಂಕಟರಾಘವನ್ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ವಸ್ತುಪ್ರದರ್ಶನ ಮಂಟಪದಲ್ಲಿ ಸಂಜೆ 6 ಗಂಟೆಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ನೃತ್ಯೋತ್ಸವ ನಡೆಯಲಿದೆ. ಬಳಿಕ ರಾತ್ರಿ 8 ಗಂಟೆಗೆ ಬೆಂಗಳೂರಿನ ಕಲಾಂಶು ನೃತ್ಯ ಮತ್ತು ಸಂಗೀತ ಸಂಸ್ಥೆಯವರು ಸಮೂಹ ನೃತ್ಯ ಪ್ರದರ್ಶಿಸಲಿದ್ದಾರೆ. ರಾತ್ರಿ ಶ್ರೀ ಮಂಜುನಾಥ ಸ್ವಾಮಿಯ ಗೌರಿಮಾರುಕಟ್ಟೆ ಉತ್ಸವ ನಡೆಯಲಿದೆ. ಸಂಜೆ 6.30ರಿಂದ ಮಹೋತ್ಸವ ಸಭಾಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ಹೇಮಾವತಿ ವಿ. ಹೆಗ್ಗಡೆ, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಕುಟುಂಬಸ್ಥರ ಮಾರ್ಗದರ್ಶನದಲ್ಲಿ ಸ್ಥಳೀಯ ಶ್ರಾವಕ ಶ್ರಾವಿಕೆಯರಿಂದ ನಡೆಯಲಿದೆ. ರಾತ್ರಿ 8 ಗಂಟೆಯಿಂದ ಆದಿಕವಿ ನಾಡೋಜ ಪಂಪನ ಆದಿಪುರಾಣ ಮಹಾಕಾವ್ಯದ ಆಯ್ದಭಾಗಗಳ ವಾಚನ ಮತ್ತು ಪ್ರವಚನವ. ಶಿವಮೊಗ್ಗದ ಗಮಕಿ ಗಿರಿಜಮ್ಮ ದಾಸ್ ವಾಚಿಸಲಿದ್ದು, ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಬಿ.ಪಿ. ಸಂಪತ್ ಕುಮಾರ್ ಪ್ರವಚನ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

