ವಸ್ತ್ರ ವಿನ್ಯಾಸ ತರಬೇತಿ: ಮಹಿಳೆಯರಿಂದ ಅರ್ಜಿ ಆಹ್ವಾನ
ಬೆಳ್ತಂಗಡಿ: ಉಜಿರೆಯ ರುಡ್ಸೆಟ್ ಸಂಸ್ಥೆಯು ಡಿ. 13ರಿಂದ ಜ. 2 ರವರೆಗೆ ಮಹಿಳೆಯರಿಗಾಗಿ 21 ದಿನಗಳ ವಸ್ತ್ರವಿನ್ಯಾಸ ತರಬೇತಿಯನ್ನು ಹಮ್ಮಿಕೊಂಡಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ವಿಷಯದಲ್ಲಿ ಪ್ರಾಥಮಿಕ ಜ್ಞಾನ ಇರುವ ಅಭ್ಯರ್ಥಿಗಳು ದೂರವಾಣಿ ಮೂಲಕ ಕೂಡಲೇ ಹೆಸರು ನೋಂದಾಯಿಸಿಕೊಳ್ಳಬಹುದು. ಮುಂದಿನ ತಿಂಗಳುಗಳಲ್ಲಿ ರುಡ್ಸೆಟ್ ಸಂಸ್ಥೆಯಲ್ಲಿ ಪುರುಷರ ಪಾರ್ಲರ್ ಮ್ಯಾನೇಜ್ಮೆಂಟ್ (21 ದಿನ), ಜೇನು ಸಾಕಾಣಿಕೆ (6 ದಿನಗಳು), ಕಂಪ್ಯೂಟರ್ ಡಿಟಿಪಿ (45 ದಿನ), ಡೀಸೆಲ್ ಅಟೋ ರಿಕ್ಷಾ ರಿಪೇರಿ (30 ದಿನಗಳು), ಪಂಪ್ಸೆಟ್ ಮತ್ತು ಮೋಟಾರ್ ರಿವೈಂಡಿಂಗ್ (30 ದಿನಗಳು), ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ (10 ದಿನಗಳು), ರಬ್ಬರ್ ಟ್ಯಾಪಿಂಗ್ (10 ದಿನಗಳು) ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳು ಯಾವುದೇ ರೀತಿಯ ಶುಲ್ಕವನ್ನು ಭರಿಸಬೇಕಾಗಿಲ್ಲ. ಊಟ, ವಸತಿ ಮತ್ತು ತರಬೇತಿ ಕೂಡ ಉಚಿತವಾಗಿರುತ್ತದೆ. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ವ್ಯಾಪ್ತಿಯ ಅಭ್ಯರ್ಥಿಗಳು ತರಬೇತಿಗಳಿಗೆ ಬರಲು 18 ರಿಂದ 45 ವರ್ಷಗಳ ವಯೋವುತಿಯ ಕನ್ನಡ ಓದು, ಬರಹ ಬಲ್ಲವರಾಗಿರಬೇಕು. ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ಅಥವಾ ಸಂಸ್ಥೆಯ ವೆಬ್ಸೆಟ್ನಿಂದ (ಢಿಢಿಢಿ.್ಠ್ಡಜಡಜಡ್ಝಿಡ್ಠಿಛ್ಝಟ್ಝಿಟ್ಜಿ.್ಟ್ಠ್ಜ) ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ನಿರ್ದೇಶಕರು, ರುಡ್ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ - 574 240, ಬೆಳ್ತಂಗಡಿ ತಾಲೂಕು, ದ.ಕ. ಇವರಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256- 236404 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

