ಸಾರ್ವಜನಿಕ ರಸ್ತೆ ಮುಚ್ಚಲು ಹುನ್ನಾರ: ತೀವ್ರ ಆಕ್ಷೇಪ
ಉಪ್ಪಿನಂಗಡಿ: ಸಾರ್ವಜನಿಕ ರಸ್ತೆ ಮುಚ್ಚಿ ಪರ್ಯಾಯ ರಸ್ತೆ ನಿರ್ಮಿಸಲು ಮುಂದಾದ ವ್ಯಕ್ತಿಯ ವಿರುದ್ಧ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಬೆದ್ರೋಡಿ- ರೆಂಜಾಳ ಗ್ರಾಪಂ ರಸ್ತೆಯ ಬೆದ್ರೋಡಿ ಎಂಬಲ್ಲಿನ ನಿವಾಸಿಯೊಬ್ಬರು ಸಾರ್ವಜನಿಕ ರಸ್ತೆಯು ತಮ್ಮ ಜಮೀನಿನಲ್ಲಿ ಹಾದು ಹೋಗುತ್ತದೆ ಎಂಬ ಕಾರಣ ನೀಡಿ, ಪರ್ಯಾಯ ರಸ್ತೆ ನಿರ್ಮಿಸಿಕೊಡುವುದಾಗಿ ಹೇಳಿ ಈಗಾಗಲೇ ಬಳಕೆಯಲ್ಲಿರುವ ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಲು ಮುಂದಾಗಿದ್ದರು. ಇದಕ್ಕೆ ಆಕ್ಷೇಪ ಸೂಚಿಸಿದ ಸ್ಥಳೀಯರು, ಸದರಿ ರಸ್ತೆ ಗ್ರಾಪಂ ರಸ್ತೆಯಾಗಿದ್ದು ಹಲವು ವರ್ಷಗಳಿಂದ ಬಳಕೆ ಮಾಡುತ್ತಿದ್ದೇವೆ. ಇದೀಗ ಏಕಾಏಕಿಯಾಗಿ ರಸ್ತೆ ಬಂದ್ ಮಾಡಿ ಪರ್ಯಾಯ ರಸ್ತೆ ನಿರ್ಮಿಸಲು ಮುಂದಾಗಿರುವುದು ತಪ್ಪು. ಈ ರಸ್ತೆಯು ಗ್ರಾಪಂ ದಾಖಲೆಗಳಲ್ಲೂ ಸಾರ್ವಜನಿಕ ರಸ್ತೆಯಾಗಿದ್ದು ಬಂದ್ ಮಾಡಬಾರದು ಎಂದು ಆಕ್ಷೇಪ ಸೂಚಿಸಿದರು. ಈ ವೇಳೆ ಉಭಯ ಕಡೆಗಳಿಂದ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಉದ್ರಿಕ್ತವಾಯಿತು. ಕೂಡಲೆ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ಘಟನಾ ಸ್ಥಳಕ್ಕೆ ಜಿಪಂ ಸದಸ್ಯ ಕೇಶವ ಗೌಡ, ಬಜತ್ತೂರು ಗ್ರಾಪಂ ಉಪಾಧ್ಯಕ್ಷೆ ಲಲಿತಾ ಬೆದ್ರೋಡಿ, ಸದಸ್ಯರಾದ ಗಣೇಶ್ ಕುಲಾಲ್, ಧನಂಜಯ ಬೆದ್ರೋಡಿ ಆಗಮಿಸಿ ಎರಡೂ ಕಡೆಯವರೊಂದಿಗೆ ಮಾತುಕತೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

