ದಕ್ಷಿಣ ಕನ್ನಡ

ನಾಳೆ ವಿದ್ಯುತ್ ವ್ಯತ್ಯಯ

Published On :

ಮಂಗಳೂರು: ಕುಂಜಿಬೆಟ್ಟು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಉಡುಪಿ ಹಾಗೂ ಉದ್ಯಾವರ ಫೀಡರ್‌ನಲ್ಲಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.5ರಂದು ಬೆಳಗ್ಗೆ 9.30ರಿಂದ ಸಂಜೆ 5.30ರವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಉಡುಪಿ ನಗರ ಪ್ರದೇಶಗಳಾದ ಕುಂಜಿಬೆಟ್ಟು, ಚಿಟ್ಟಾಡಿ, ಕೃಷ್ಣಮಠ ಪರಿಸರ, ಒಳಕಾಡು, ಕೊಳಂಬೆ, ಮಿಷನ್ ಕಾಂಪೌಂಡ್, ಶಾಂತಿನಗರ, ಕಿನ್ನಿಮೂಲ್ಕಿ, ಕೋರ್ಟ್ ರಸ್ತೆ, ಕೆ.ಎಂ. ಮಾರ್ಗ, ಮಾರುತಿ ವಿಥೀಕ, ಬೈಲರು, ಉದ್ಯಾವರ, ಪಿತ್ರೋಡಿ, ಕಡೆಕಾರು ಹಾಗೂ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ನಾಳೆಯಿಂದ ಬತ್ತ ಖರೀದಿ ಕೇಂದ್ರ ಆರಂಭ
ಉಡುಪಿ: ಉಡುಪಿ ಜಿಲ್ಲೆಯ ಉಡುಪಿ, ಕಾರ್ಕಳ ಮತ್ತು ಕುಂದಾಪುರದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಬುಧವಾರದಿಂದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ಸರ್ಕಾರ ನಿಗಧಿಪಡಿಸಿರುವಂತೆ ಪ್ರತಿ ಕ್ವಿಂಟಾಲಿಗೆ ರು. 16,000 ದರಲ್ಲಿ ರೈತರಿಂದ ಬತ್ತ ಖರೀದಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ಪ್ರಕಟಿಸಿದ್ದಾರೆ. ರೈತರು ತಾವು ಬೆಳೆದ ಬತ್ತದ ಬೆಳೆಗಳನ್ನು ಮಧ್ಯವರ್ತಿಗಳಿಗೆ ಹಾಗೂ ದಲ್ಲಾಳಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡಿ ಮೋಸ ಹೋಗದೆ ತಮ್ಮ ಸಮೀಪದ ಎಪಿಎಂಸಿ ಕೇಂದ್ರಗಳಲ್ಲಿ ಆರಂಭಿಸಿರುವ ಬತ್ತ ಖರೀದಿ ಕೇಂದ್ರಗಳಲ್ಲಿ ಸರ್ಕಾರ ನಿಗಧಿಪಡಿಸಿರುವ ಬೆಂಬಲ ಬೆಲೆಗೆ ಮಾರಾಟ ಮಾಡುವುದರ ಮೂಲಕ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ, ರೈತರು ತಮ್ಮ ಬೆಳೆಯನ್ನು ಮಾರಾಟ ಮಾಡುವ ಮುನ್ನ ಬತ್ತದ ಮಾದರಿ ಮತ್ತು ಗುಣಮಟ್ಟವನ್ನು ಪರೀಕ್ಷೆಗೆ ನೀಡಬೇಕು ಎಂದು ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.