ದಕ್ಷಿಣ ಕನ್ನಡ

ಬಿ.ಸಿ.ರೋಡ್: ಮತ್ತೆ ಮರಳು ಅಕ್ರಮ ಸಾಗಾಟ ಲಾರಿ ವಶ

Published On :

ಬಂಟ್ವಾಳ: ಜಿಲ್ಲೆಯ ವಿವಿಧ ಭಾಗಗಳಲ್ಲಿ ನೇತ್ರಾವತಿ ನದಿಯಿಂದ ಬೆಂಗಳೂರಿಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಬಂಟ್ವಾಳ ನಗರ ಪೊಲೀಸರು ಮಂಗಳವಾರ ಬಿ.ಸಿ.ರೋಡ್‌ನಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಬಿ.ಸಿ.ರೋಡ್ ಹಾಗೂ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಹದಿನೈದಕ್ಕೂ ಅಧಿಕ ಮರಳು ಸಾಗಾಟದ ಲಾರಿಗಳನ್ನು ವಶಕ್ಕೆ ಪಡೆದು ದಂಡ ವಿಧಿಸಿದ್ದರು. ಬಳಿಕ ಸ್ವಲ್ಪ ದಿನಗಳ ಮಟ್ಟಿಗೆ ಸ್ಥಗಿತಗೊಂಡಿದ್ದ ಮರಳು ಅಕ್ರಮ ಸಾಗಾಟ ಮತ್ತೆ ಕಾರ್ಯಾರಂಭಗೊಂಡಿದೆ.
ಮಂಗಳವಾರ ಮುಂಜಾನೆ ರಾತ್ರಿ ಗಸ್ತಿನಲ್ಲಿದ್ದ ನಗರ ಪೊಲೀಸ್ ಠಾಣೆಯ ಎಸ್ಸೈ ಕಬ್ಬಾಳ್‌ರಾಜ್ ಮತ್ತು ಸಿಬ್ಬಂದಿ ಮರಳು ಸಾಗಾಟದ ನಾಲ್ಕು ಲಾರಿಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

ಎಸ್ಸೈ ವರ್ಗಾವಣೆ ಹುನ್ನಾರ?
ಮರಳು ಅಕ್ರಮ ಸಾಗಾಟದಾರರಿಗೆ ಸಿಂಹಸ್ವಪ್ನವಾಗಿರುವ ನಗರ ಠಾಣೆ ಎಸ್ಸೈ ಕಬ್ಬಾಳ್‌ರಾಜ್ ವರ್ಗಾವಣೆಗೆ ರಾಜಕೀಯ ಷಡ್ಯಂತ್ರಗಳು ನಡೆಯುತ್ತಿರುವ ಬಗ್ಗೆ ಗುಮಾನಿ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಮರಳು ಮಾಫಿಯಾ ವಿರುದ್ಧ ಸಮರ ಸಾರಿರುವ ಎಸ್ಸೈ ಕಬ್ಬಾಳ್‌ರಾಜ್ ಹಾಗೂ ಕೆಲ ಪೊಲೀಸ್ ಸಿಬ್ಬಂದಿಗಳನ್ನು ವರ್ಗಾಯಿಸಲು 'ಕಾಣದ ಕೈಗಳು' ಕೆಲಸ ಮಾಡುತ್ತಿವೆ ಎನ್ನುವ ಆರೋಪ ಕೇಳಿ ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.