ದಕ್ಷಿಣ ಕನ್ನಡ

ಧರ್ಮಸ್ಥಳ: ಸಮವಸರಣ ಪೂಜೆ ಸಂಪನ್ನ

Published On :

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಂಗಳವಾರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು.
ತೀರ್ಥಂಕರರು ತಮ್ಮ ದಿವ್ಯ ಧ್ವನಿಯ ಮೂಲಕ ಧರ್ಮೋಪದೇಶ ನೀಡುವ ಸಭೆಗೆ ಸಮವಸರಣ ಎನ್ನುತ್ತಾರೆ. ಜೈನ ಸಂಪ್ರದಾಯದ ಪ್ರಕಾರ ಬಸದಿಗಳು ಸಮವಸರಣದ ಪ್ರತೀಕವಾಗಿವೆ.
ಹೆಗ್ಗಡೆಯವರ ಬೀಡಿನಿಂದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಮೂರ್ತಿಯನ್ನು ಮಹೋತ್ಸವ ಸಭಾ ಭವನಕ್ಕೆ ಭವ್ಯ ಮೆರವಣಿಗೆಯಲ್ಲಿ ಕೊಂಡುಹೋದ ಬಳಿಕ ಅಲ್ಲಿ ಸ್ಥಳೀಯ ಶ್ರಾವಕ - ಶ್ರಾವಿಕೆಯರಿಂದ ಅಷ್ಟವಿಧಾರ್ಚನೆ ಪೂಜೆ, ಸಂಗೀತ ಪೂಜೆ, ಪಂಚ ನಮಸ್ಕಾರ ಮಂತ್ರ ಪಠಣ ನಡೆಯಿತು.
ಹೇಮಾವತಿ ವಿ. ಹೆಗ್ಗಡೆ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು.
ಶಿವಮೊಗ್ಗದ ಗಿರಿಜಮ್ಮ ದಾಸ್ ಆದಿಪುರಾಣ ಮಹಾಕಾವ್ಯದ ವಾಚನವನ್ನು ಮಾಡಿದರೆ, ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಬಿ.ಪಿ. ಸಂಪತ್ ಕುಮಾರ್ ಪ್ರವಚನ ಮಾಡಿದರು.
ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಡಿ. ಶ್ರೇಯಸ್ ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.