ಬೆದ್ರೋಡಿ: ರಸ್ತೆ ಬಂದ್ ಮಾಡದಿರಲು ಸೂಚನೆ
ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಸಾರ್ವಜನಿಕ ರಸ್ತೆಯನ್ನು ಸ್ಥಳೀಯರೊಬ್ಬರು ಬಂದ್ ಮಾಡಲೆತ್ನಿಸಿದ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ತಹಸೀಲ್ದಾರ್ ಟಿ.ಕುಳ್ಳೇ ಗೌಡ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಬಂದ್ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಬೆದ್ರೋಡಿಯಿಂದ ರೆಂಜಾಳಕ್ಕೆ ಹೋಗುವ ಸಾರ್ವಜನಿಕ ರಸ್ತೆಯನ್ನು ಸ್ಥಳೀಯ ಅಬ್ಬಾಸ್ ಎಂಬವರು ತಮ್ಮ ಖಾಸಗಿ ಜಮೀನಿನಲ್ಲಿ ರಸ್ತೆ ಹಾದು ಹೋಗುತ್ತಿದೆ ಎಂದು ಹೇಳಿ ಬಂದ್ ಮಾಡಲು ಮುಂದಾಗಿದ್ದರು. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಅಲ್ಲದೆ ಸರ್ವೇ ಕಾರ್ಯ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿತ್ತು. ರಸ್ತೆ ಬಳಕೆದಾರರು ಸಹಾಯಕ ಕಮೀಷನರ್ಗೆ ದೂರು ಸಲ್ಲಿಸಿದ್ದರು. ಸಹಾಯಕ ಕಮಿಷನರ್ ಸೂಚನೆ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಕುಳ್ಳೇ ಗೌಡ, ಉಪ್ಪಿನಂಗಡಿ ಹೋಬಳಿ ಕಂದಾಯ ನಿರೀಕ್ಷಕ ಮಂಜುನಾಥ್ ಪರಿಶೀಲನೆ ನಡೆಸಿದರು. ಪ್ರಕರಣವನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲು ಸಹಕರಿಸುವಂತೆ ಮನವಿ ಮಾಡಿದ ತಹಸೀಲ್ದಾರ್, ಸದ್ರಿ ರಸ್ತೆಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಸೂಚಿಸಿದರು. ಅಲ್ಲದೇ ಘನ ವಾಹನ ಓಡಾಡಲು ಅನುಕೂಲವಾಗುವಂತೆ ರಸ್ತೆಗೆ ಜಾಗ ಬಿಟ್ಟುಕೊಡಬೇಕೆಂದು ಅಬ್ಬಾಸ್ ಅವರಿಗೆ ಸೂಚನೆ ನೀಡಿದರು. ಬಳಿಕ ರಸ್ತೆ ಬಂದ್ ಮಾಡಿ ಸಾರ್ವಜನಿಕ ಸಂಚಾರಕ್ಕೆ ಯಾವುದೇ ತೊಂದರೆ ಉಂಟು ಮಾಡುವುದಿಲ್ಲ ಎಂದು ಅಬ್ಬಾಸ್ ಅವರಿಂದ ತಹಸೀಲ್ದಾರ್ ಹೇಳಿಕೆ ಪಡೆದುಕೊಂಡಿದ್ದಾರೆ.
ಗ್ರಾಮಕರಣಿಕ ರಮೇಶ್, ಬಜತ್ತೂರು ಗ್ರಾ.ಪಂ. ಸದಸ್ಯ ಗಣೇಶ್ ಕುಲಾಲ್, ಧನಂಜಯ ಬೆದ್ರೋಡಿ, ಮಾಜಿ ಸದಸ್ಯ ರಾಜೇಶ್ ಪಿಜಕ್ಕಳ, ಸ್ಥಳೀಯ ಪ್ರಮುಖರಾದ ಕೇಶವ ಗೌಡ ರೆಂಜಾಳ, ರಾಮಣ್ಣ ಗೌಡ ರೆಂಜಾಳ, ಜತ್ತಪ್ಪ ಗೌಡ ರೆಂಜಾಳ, ಪೂವಣಿ ಗೌಡ ಸುಳ್ಯ, ನಾಗೇಶ್ ರೆಂಜಾಳ, ವಾಸು ರೆಂಜಾಳ ಇದ್ದರು.
--
ಹಾಜಬ್ಬ ಶಾಲೆಗೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಭೇಟಿ
ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ನಿರ್ಮಾಣ ಮಾಡಿದ ಪ್ರೌಢಶಾಲೆಗೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೊರಗಪ್ಪ ನಾಯ್ಕ್ ಮತ್ತು ಸದಸ್ಯರು ಭೇಟಿ ನೀಡಿದ ಅನುದಾನ ಭರವಸೆ ನೀಡಿದರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೊರಗಪ್ಪ ನಾಯ್ಕ್, ಸದಸ್ಯರಾದ ಶಶಿಧರ ಕುಂಪಲ, ಎನ್.ಎಸ್. ಕರೀಂ, ಶಿಕ್ಷಣ ಇಲಾಖೆ ನಿರ್ದೇಶಕ ಮೊಸೆಸ್ ಜಯಶೇಖರ್ ಇದ್ದರು. ಹಾಜಬ್ಬ ಅವರು ಪಿಯುಸಿ ಆರಂಭಿಸುವ ಬಗ್ಗೆ ಮತ್ತು ಕೋಣೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯ್ತಿ ವತಿಯಿಂದ ಕೋಣೆಯಿಂದ ಬಿಸಿಯೂಟ ಅಡುಗೆಕೋಣೆ ನಿರ್ಮಾಣ ಅನುದಾನ ಕೊರತೆಯಿಂದ ಅರ್ಧದಲ್ಲಿಯೇ ನಿಂತಿದೆ. ಇದನ್ನು ಪೂರ್ಣಗೊಳಿಸಲು ಮನವಿ ಮಾಡಿದರು. ಇದಕ್ಕೆ ಒಪ್ಪಿದ ಅಧ್ಯಕ್ಷರು ಇನ್ನು ಒಂದು ಕೋಣೆ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.
ಮೈದಾನ ತಡೆಗೋಡೆ ರಚನೆ 5 ಲಕ್ಷ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸುವುದಾಗಿ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

