ಸುಬ್ರಹ್ಮಣ್ಯ: ಚಂಪಾಷಷ್ಠಿ ಬ್ರಹ್ಮರಥೋತ್ಸವ
ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ ಸಂಭ್ರಮದ ಚಂಪಾಷಷ್ಠಿ ಬ್ರಹ್ಮರಥೋತ್ಸವ ನೆರವೇರಿತು.
ಮೊದಲು ದೇವಳದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಲ್ಲಕ್ಕಿ ಉತ್ಸವ ನೆರವೇರಿತು. ನಂತರ ರಾಜಬೀದಿಯಲ್ಲಿ ನಾಗಸ್ವರ, ಪಂಚವಾದ್ಯ, ಬ್ಯಾಂಡ್, ಜಾಗಟೆ, ಶಂಖ ವಾದ್ಯ ಮತ್ತು ಚೆಂಡೆ ವಾದನಗಳ ಹಿಮ್ಮೇಳದಲ್ಲಿ ಸಾಲಂಕೃತ ಆನೆ, ಬಿರುದಾವಳಿ, ಭಕ್ತಜನರ ಜಯಘೋಷದ ನಡುವೆ ಬೆಳಗ್ಗೆ 8.12ರ ಧನುರ್ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯು ಬ್ರಹ್ಮ ರಥಾರೂಢರಾದರು. ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೇಶವ ಜೋಗಿತ್ತಾಯರು ಶ್ರೀದೇವರಿಗೆ ಸುವರ್ಣವೃಷ್ಟಿಗೈದರು. ಭಕ್ತಾಧಿಗಳಿಗೆ ಧನ, ಕನಕ, ಹೂವು, ಫಲವಸ್ತು ಪ್ರಸಾದಗಳನ್ನು ಅರ್ಚಕರು ರಥದಿಂದ ಎಸೆದರು. ಭಕ್ತಾಧಿಗಳು ನಾಣ್ಯ, ಕಾಳು ಮೆಣಸು, ಸಾಸಿವೆಗಳನ್ನು ರಥಕ್ಕೆ ಎಸೆದರು. ಬಳಿಕ ಪ್ರಥಮವಾಗಿ ಪಂಚಮಿ ರಥೋತ್ಸವ ನೆರವೇರಿತು. ನಂತರ ಅಸಂಖ್ಯಾತ ಭಕ್ತರ ಜಯಘೋಷದೊಂದಿಗೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ಮಹಾರಥೋತ್ಸವ ನಡೆಯಿತು
ಬ್ರಹ್ಮರಥ ಎಳೆಯಲು ಸೇವಾರ್ಥಿಗಳಿಗೆ ಪಾಸ್: ವರ್ಷದಲ್ಲಿ ಒಮ್ಮೆ ನಡೆಯುವ ಮಹಾರಥೋತ್ಸವದಲ್ಲಿ ರಥ ಎಳೆಯಲು ನೂಕು ನುಗ್ಗಲು ಉಂಟಾಗುತ್ತಿತ್ತು. ಈ ಗೊಂದಲ ತಪ್ಪಿಸಲು ಆಡಳಿತ ಮಂಡಳಿಯು ಈ ಬಾರಿ ಬ್ರಹ್ಮರಥೋತ್ಸವ ಸೇವೆ ಮಾಡಿಸಿದವರಿಗೆ ಮತ್ತು ಬ್ರಹ್ಮರಥ ಎಳೆಯುವ ಸ್ಥಳಿಯ ಭಕ್ತರಿಗೆ ರಥ ಎಳೆಯುವ ಪಾಸನ್ನು ನೀಡಿತ್ತು.
ಬೆತ್ತ ಶ್ರೀ ದೇವಳಕ್ಕೆ: ಈ ಹಿಂದೆ ಬ್ರಹ್ಮರಥ ಎಳೆದ ಬೆತ್ತವನ್ನು ರಥ ಎಳೆದ ಭಕ್ತರಿಗೆ ನೀಡಲಾಗುತಿತ್ತು. ಇದರಿಂದಾಗಿ ರಥ ಎಳೆದ ತಕ್ಷಣ ಬೆತ್ತಕ್ಕಾಗಿ ಭಕ್ತರು ನೂಕು ನುಗ್ಗಲು ಮಾಡುತ್ತಿದ್ದರು. ಇದನ್ನು ತಪ್ಪಿಸಲು ಮತ್ತು ಶ್ರೀ ದೇವಳಕ್ಕೆ ಸಾಕಷ್ಟು ಬೆತ್ತವು ಮಹಾಪ್ರಸಾದದಲ್ಲಿ ನೀಡಲು ಅವಶ್ಯವಾದುದರಿಂದ ರಥ ಎಳೆಯಲು ಉಪಯೋಗಿಸಿದ ಎಲ್ಲಾ ಬೆತ್ತವನ್ನು ಶ್ರೀ ದೇವಳಕ್ಕೆ ಕೊಂಡೊಯ್ಯಲಾಯಿತು. ಇದರಿಂದಾಗಿ ಅನಾವಶ್ಯಕ ಗೊಂದಲಕ್ಕೆ ಕಡಿವಾಣ ಬಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

