ಅಪಘಾತ: ನಾಲ್ವರಿಗೆ ಗಾಯ
ಶಂಕರನಾರಾಯಣ: ವಂಡ್ಸೆ ಹೋಬಳಿಯ ಆಜ್ರಿ ಗ್ರಾಮದ ಕಂಜಿಮನೆ ಬಚ್ಚಾಣಿ ಎಂಬಲ್ಲಿ ಬಸ್ಸೊಂದು ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ. ನೇರಳಕಟ್ಟೆಯಿಂದ ಬಸ್ಸನ್ನು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬರುತ್ತಿದ್ದ ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ 2 ವಾಹನಗಳು ಜಖಂಗೊಂಡಿದ್ದು, ಬಸ್‌ನಲ್ಲಿದ್ದ 4 ಮಂದಿಗೆ ಗಾಯಗಳಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಅಪಘಾತ: ಓರ್ವನಿಗೆ ಗಾಯ
ಉಡುಪಿ: ಕಾರು ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಇಲ್ಲಿನ ಅಬ್ದುಲ್ಲಾ ವುಡ್ ಇಂಡಸ್ಟ್ರೀ ಎದುರು ಶನಿವಾರ ನಡೆದಿದೆ. ಗಾಯಗೊಂಡವರನ್ನು ಸ್ಟಿಫನ್ ವಿಜಯ ಅಂದ್ರಾದೆ ಎಂದು ಗುರುತಿಸಲಾಗಿದೆ. ಇವರು ತಮ್ಮ ಬೈಕಿನಲ್ಲಿ ಉಡುಪಿ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಗೊಂಡ ವಿಜಯ ಅಂದ್ರಾದೆ ಅವರನ್ನು ಸ್ಥಳೀಯ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಾರು ಚಾಲಕ ಸಿಲ್ವೇಸ್ಟರ್ ಡಿ' ಸೋಜ ಅವರು ಕಾರನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದಿರುವುದೇ ಈ ಅಪಘಾತಕ್ಕೆ ಕಾರಣ ಎಂಬುದಾಗಿ ವಿಜಯ ಅಂದ್ರಾದೆ ನೀಡಿದ ದೂರಿನಂತೆ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಗೋಹತ್ಯೆ: ಇಬ್ಬರ ಸೆರೆ
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ಕಾಡಿನಲ್ಲಿ ಅಕ್ರಮವಾಗಿ ಗೋ ಹತ್ಯೆ ನಡೆಸುತ್ತಿದ್ದ ತಾಣಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ದನದ ಕರುವೊಂದನ್ನು ಕಡಿದು ಹಾಕಲಾಗಿತ್ತು. ಆರೋಪಿಗಳಾದ ವಿನ್ಸೆಂಟ್ ಬೊನ್ಸಾಲಿಸ್ ಮತ್ತು ಬೋಣಿಪಾಸ್ ಬೋನ್ಸಾಲಿಸ್ ಎಂಬಿಬ್ಬರನ್ನು ದಸ್ತಗಿರಿ ಮಾಡಿದ್ದಾರೆ. ಉಪ್ಪಿನಂಗಡಿ ಎಸ್‌ಐ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

