ನ್ಯಾಯಕ್ಕಾಗಿ ಧ್ವನಿ ನಮ್ಮ ಸಂಸ್ಕೃತಿ: ಕೇಮಾರು ಶ್ರೀ
ಬೆಳ್ತಂಗಡಿ: ಅತ್ಯಾಚಾರದ ಸಂಸ್ಕೃತಿ ನಮ್ಮದಲ್ಲ. ಅನ್ಯಾಯವನ್ನು ವಿರೋಧಿಸಿ ನ್ಯಾಯಕ್ಕಾಗಿ ಧ್ವನಿ ಎತ್ತುವುದು ನಮ್ಮ ಸಂಸ್ಕೃತಿ ಎಂದು ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿ ಹೇಳಿದರು.
ಅವರು ಭಾನುವಾರ ಉಜಿರೆಯಲ್ಲಿ ಪ್ರಜಾಪ್ರಭುತ್ವ ವೇದಿಕೆಯ ಉಜಿರೆ ವಲಯದ ನೇತೃತ್ವದಲ್ಲಿ ಸೌಜನ್ಯ ಪ್ರಕರಣ ಹಾಗೂ ನಡೆದಿರುವ ಇತರೆ ಪ್ರಕರಣಗಳ ತನಿಖೆಯನ್ನು ಸುಪ್ರೀಂ ಕೋರ್ಟ್ ಸುಪರ್ದಿಯಲ್ಲಿ ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಿಬಿಐ ತನಿಖೆಗೆ ಒಪ್ಪಿಸುತ್ತೇವೆ ಎಂದ ಸರ್ಕಾರ ಯಾರ ಒತ್ತಾಯಕ್ಕೆ ಮಣಿದು ಅದರಿಂದ ಹಿಂಜರಿಯುತ್ತಿದೆ ಎಂದು ಸ್ಪಷ್ಟಪಡಿಸಲಿ. ನಮ್ಮ ನಡುವೆ ಪ್ರಾಬಲ್ಯ ಸಾಧಿಸುತ್ತಿರುವ ರಾಕ್ಷಸಿ ಶಕ್ತಿಗಳನ್ನು ಹತ್ತಿಕ್ಕಲು ಭೇದ ಮರೆತು ನಾಗರಿಕರು ಒಂದಾಗಬೇಕು ಎಂದು ಹೇಳಿದರು. ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುತ್ತೆವೆಂದು ಹೇಳಿದ್ದ ರಾಜ್ಯ ಸರ್ಕಾರ ಜನರನ್ನು ವಂಚಿಸಿದೆ. ಪ್ರಕರಣದ ತನಿಖೆ ನಡೆದು ನ್ಯಾಯ ಸಿಗುವವರೆಗೆ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಪ್ರಜಾಪ್ರಭುತ್ವ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು.
ಸಾಹಿತಿ ಅತ್ರಾಡಿ ಅಮೃತ ಶೆಟ್ಟಿ ಮಾತನಾಡಿದರು. ಸೌಜನ್ಯಾಳ ತಾಯಿ ಕುಸುಮಾವತಿ ಮತ್ತು ವೇದವಲ್ಲಿ ಟೀಚರ್ ಪತಿ ಡಾ.ಬಿ.ಆರ್. ಹರಳೆ ಅವರು ತಮ್ಮ ನೋವುಗಳನ್ನು ಹಂಚಿಕೊಂಡರು. ಸೌಜನ್ಯಾಳ ತಂದೆ ಚಂದಪ್ಪ ಗೌಡ ಇದ್ದರು.
ಸಭೆಯಲ್ಲಿ ಜಯರಾಮ್ ಗೌಡ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ರವಿಕುಮಾರ್ ಬರಮೇಲು ಪ್ರಸ್ತಾವಿಸಿದರು. ಪ್ರಜಾಪ್ರಭುತ್ವ ವೇದಿಕೆಯ ಅನಿಲ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು. ಸತೀಶ್ ಮನ್ನಡ್ಕ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

