ದಕ್ಷಿಣ ಕನ್ನಡ

ಗಿನ್ನಿಸ್ ದಾಖಲೆಯ ಯೋಗ ಪ್ರದರ್ಶನ ದ.ಕ.ದಲ್ಲಿ 27,600 ವಿದ್ಯಾರ್ಥಿಗಳು

Published On :

ಮಂಗಳೂರು: ಭವಿಷ್ಯತ್ತಿಗಾಗಿ ಯೋಗ ಪ್ರಾತ್ಯಕ್ಷಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 150 ಶಾಲೆಗಳಿಂದ2,600 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಜಿಲ್ಲೆಯ 10 ಕೇಂದ್ರಗಳಲ್ಲಿ ಯೋಗ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕಾರ್ಯಕ್ರಮ ಆಯೋಜಿಸಿದೆ. ಯೋಗ ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆ. ಜಗತ್ತಿನಲ್ಲಿ ಅತಿ ಹೆಚ್ಚು ಮಕ್ಕಳು ಏಕಕಾಲದಲ್ಲಿ ಯೋಗಾಭ್ಯಾಸ ನಡೆಸುವ ಮೂಲಕ ಕಾರ್ಯಕ್ರಮ ಗಿನ್ನೆಸ್ ದಾಖಲೆಗೆ ಸೇರುವ ನಿರೀಕ್ಷೆ ಇದೆ ಎಂದರು.
ಕಾರ್ಯಕ್ರಮದ ಪ್ರಚಾರ ರಾಯಭಾರಿ, ಗಿನ್ನೆಸ್ ದಾಖಲೆ ಬಾಲ ನಿರ್ದೇಶಕ ಕಿಶನ್ ಮಾತನಾಡಿ, ಒತ್ತಡ ಬದುಕಿನಲ್ಲಿ ಯೋಗ ಅತ್ಯಂತ ಆವಶ್ಯಕ. ವಿದೇಶಿಯರು ಮನಗಂಡಿದ್ದು, ನಮ್ಮ ಸಂಸ್ಕೃತಿ ಬಗ್ಗೆ ನಮಗೆ ಅರಿವು ಮಾಡಿಸಲು ಈ ಕಾರ್ಯಕ್ರಮ ಅತ್ಯಗತ್ಯ ಎಂದರು. ಗಿನ್ನಿಸ್ ದಾಖಲೆಯಿಂದ ಯೋಗ ಇನ್ನೂ ಹೆಚ್ಚಿನ ಕಡೆ ತಲುಪಬಹುದು ಎಂದರು. ಆರೋಗ್ಯ ಸಚಿವ ಯು.ಟಿ.ಖಾದರ್, ಹೆಚ್ಚುವರಿ ಜಿಲ್ಲಾಧಿಕಾರಿ ದಯಾನಂದ್, ಮನಪಾ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ, ಮಂಗಳೂರು ಸಹಾಯಕ ಕಮಿಷನರ್ ಡಾ.ಪ್ರಶಾಂತ್, ತಹಸೀಲ್ದಾರ್ ಮೋಹನ ರಾವ್, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಡಿತ್ತಾಯ, ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪ್ರಶಾಂತ್ ಶೆಟ್ಟಿ, ಮಂಜುನಾಥ ಎಂ.ಎನ್. ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.