ದಕ್ಷಿಣ ಕನ್ನಡ

ಚುನಾವಣೆ: ವೆಚ್ಚ ವಿವರ ಪರಿಶೀಲನೆ

Published On :

ಮಂಗಳೂರು: ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಮತ್ತಿತರ ನಗರ ಸ್ಥಳೀಯ ಸಂಸ್ಥೆಗಳಿಗೆ ಈಚೆಗೆ ನಡೆದ ಚುನಾವಣೆಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ವೆಚ್ಚ ವಿವರ ಸಲ್ಲಿಸಿರುವ ಮತ್ತು ಸಲ್ಲಿಸದೇ ಇರುವ ಬಗ್ಗೆ ರಾಜ್ಯ ಚುನಾವಣಾ ಆಯುಕ್ತ ಸಿ.ಆರ್.ಚಿಕ್ಕಮಠ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿದರು.  ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ತಮ್ಮ ಖರ್ಚು ವೆಚ್ಚಗಳ ವಿವರ ಸಲ್ಲಿಸುವುದು ಕಡ್ಡಾಯ. ನಿಗದಿತ ಅವಧಿಯೊಳಗೆ ವೆಚ್ಚ ವಿವರ ಸಲ್ಲಿಸದಿದ್ದರೆ ಅವರನ್ನು ಅನರ್ಹಗೊಳಿಸಲಾಗುವುದು. ಅಲ್ಲದೆ ಸ್ಪರ್ಧಿಸಿದ್ದ ಇತರ ಅ್ಯರ್ಥಿಗಳನ್ನು ಚಟುನಾವಣೆಗೆ ಸ್ಪರ್ಧಿಸುವುದರಿಂದ ಅನರ್ಹಗೊಳಿಸಲಾಗುವುದು ಎಂದರು. ವೆಚ್ಚ ವಿವರ ಸಲ್ಲಿಸದ ಅಭ್ಯರ್ಥಿಗಳಿಗೆ ಸಮರ್ಪಕ ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿದ ಅವರು, ಈಗಾಗಲೇ ನೋಟಿಸ್ ಜಾರಿಗೊಳಿಸಿದ್ದರೂ 2ನೇ ನೋಟಿಸ್ ನೀಡುವಂತೆ ಸೂಚಿಸಿದರು. ಮಹಾನಗರ ಪಾಲಿಕೆ ಚುನಾವಣೆಗೆ 60 ವಾರ್ಡ್‌ಗೆ 243 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 212 ಮಂದಿ ವೆಚ್ಚ ವಿವರ ನೀಡಿದ್ದಾರೆ. ಜಿಲ್ಲಾಧಿಕಾರಿ ಪ್ರಕಾಶ್, ಅಪರ ಜಿಲ್ಲಾಧಿಕಾರಿ ದಯಾನಂದ್, ಉಡುಪಿ ಅಪರ ಜಿಲ್ಲಾಧಿಕಾರಿ ಕುಮಾರ್, ಮಹಾನರಗರ ಪಾಲಿಕೆ ಆಯುಕ್ತ ಅಜಿತ್ ಕುಮಾರ್, ಉಭಯ ಜಿಲ್ಲೆಗಳ ಉಪವಿಭಾಗಾಧಿಕಾರಿಗಳು, ತಹಸೀಲ್ದಾರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.