ದತ್ತಪೀಠಕ್ಕೆಪುತ್ತೂರಿನಿಂದ 2ಸಾವಿರ ಕಾರ್ಯಕರ್ತರು
ಪುತ್ತೂರು: ಚಿಕ್ಕಮಗಳೂರಿನ ದತ್ತಪೀಠದಲ್ಲಿ ನಡೆಯುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಪುತ್ತೂರು ಜಿಲ್ಲೆಯಿಂದ 2 ಸಾವಿರ ಕಾರ್ಯಕರ್ತರು ತೆರಳಲಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿ.15ರಂದು ಸಂಜೆ ದತ್ತಮಾಲಾಧಾರಿಗಳಿಂದ ನಗರ ಸಂಕೀರ್ತನೆ ನಡೆಯಲಿದ್ದು ದರ್ಬೆ ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತನಕ ನಡೆದು ಬಳಿಕ ಅಲ್ಲಿಂದ ದತ್ತಪೀಠಕ್ಕೆ ತೆರಳುವ ಕಾರ್ಯಕ್ರಮ ನಡೆಸಲಾಗುವುದು ಎಂದು ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡೀಕಯ್ಯ ಪೆರ್ವೋಡಿ ತಿಳಿಸಿದ್ದಾರೆ.
ಅವರು ಗುರುವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಜರಂಗದಳದ ಮಂಗಳೂರು ವಿಭಾಗ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ, ತಾಲೂಕು ಧಾರ್ಮಿಕ ಸಂರಕ್ಷಕ ಸಮಿತಿ ಅಧ್ಯಕ್ಷ ಸಂಕಪ್ಪ ಗೌಡ, ಬಜರಂಗದಳದ ಸರ್ವೆ ವಲಯ ಸಂಚಾಲಕರಾದ ತಿಲಕ್ ಮತ್ತು ಜಯಪ್ರಸಾದ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

