ಗೋಪಾಲಕೃಷ್ಣ ಕುರುಪ್ಗೆ ಯಕ್ಷಾಂಜನೇಯ, ರಾಮಕೃಷ್ಣ ರಾವ್ಗೆ ಬೊಳ್ಳಿಂಬಳ ಪ್ರಶಸ್ತಿ ಪ್ರಕಟ
ಪುತ್ತೂರು: ಬೊಳುವಾರು ಶ್ರೀಆಂಜನೇಯ ಯಕ್ಷಗಾನ ಕಲಾಸಂಘ ವತಿಯಿಂದ ನೀಡಲಾಗುತ್ತಿರುವ 'ಯಕ್ಷಾಂಜನೇಯ ಪ್ರಶಸ್ತಿ'ಯನ್ನು ಹಿರಿಯ ಮದ್ದಳೆಗಾರ ಗೋಪಾಲಕೃಷ್ಣ ಕುರುಪ್ ಮತ್ತು 'ಬೊಳ್ಳಿಂಬಳ ಪ್ರಶಸ್ತಿ'ಯನ್ನು ಹಿರಿಯ ವೇಷಧಾರಿ ರೆಂಜಾಳ ರಾಮಕೃಷ್ಣ ರಾವ್ ಅವರಿಗೆ ನೀಡಿ ಗೌರವಿಸಲಾಗುವುದು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ, ಪ್ರಶಸ್ತಿ ಪ್ರದಾನ ಸಮಾರಂಭ 15ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ 45ನೇ ವಾರ್ಷಿಕ ಉತ್ಸವ ಡಿ.15ರಂದು ನಡೆಯಲಿದೆ. ಕಾರ್ಯಕ್ರಮವನ್ನು ಕಸಾಪ ಪುತ್ತೂರು ತಾಲೂಕು ಘಟಕ ಅಧ್ಯಕ್ಷ ಡಾ. ವರದರಾಜ ಚಂದ್ರಗಿರಿ ಉದ್ಘಾಟಿಸಲಿದ್ದಾರೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಐತ್ತಪ್ಪ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ವಹಿಸಲಿದ್ದಾರೆ. ಶಾಸಕಿ ಶಕುಂತಳಾ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅತಿಥಿಗಳಾಗಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ, ವೈದ್ಯೆ ಸುಧಾ ಎಸ್. ರಾವ್ ಭಾಗವಹಿಸಲಿದ್ದಾರೆ. ಪ್ರಶಸ್ತಿ ಪುರಸ್ಕೃತ ಗೋಪಾಲಕೃಷ್ಣ ಕುರುಪ್ ಬಗ್ಗೆ ಕರ್ಣಾಟಕ ಬ್ಯಾಂಕ್ನ ಕೃಷ್ಣಪ್ರಕಾಶ್ ಉಳಿತ್ತಾಯ ಮತ್ತು ರೆಂಜಾಳ ರಾಮಕೃಷ್ಣ ರಾವ್ ಬಗ್ಗೆ ಮರ್ಕಂಜದ ಜಗನ್ಮೋಹನ ರೈ ಶುಭನುಡಿ ಆಡಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಆಂಜನೇಯ ಯಕ್ಷಗಾನ ಕಲಾ ಸಂಘದ ಕಾರ್ಯದರ್ಶಿ ಟಿ. ರಂಗನಾಥ ರಾವ್, ಮಹಿಳಾ ಯಕ್ಷಗಾನ ಸಂಘದ ಅಧ್ಯಕ್ಷೆ ಪ್ರೇಮಲತಾ ಟಿ. ರಾವ್, ಬೊಳುವಾರು ಅಂಜನೇಯ ಮಂತ್ರಾಲಯದ ಧರ್ಮದರ್ಶಿ ಪಿ. ನಾರಾಯಣ ಮಣಿಯಾಣಿ ಮತ್ತು ಬೊಳ್ಳಿಂಬಳ ಶಂಕರನಾರಾಯಣ ಪ್ರತಿಷ್ಠಾನ ಅಧ್ಯಕ್ಷ ಬಿ.ಎಸ್. ಓಕುಣ್ಣಾಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

