ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಹಿರಿಯಡ್ಕ: ಇಲ್ಲಿಗೆ ಸಮೀಪದ ಪೆರ್ಡೂರು ಗ್ರಾಮದ ಈರ್ಬೆಟ್ಟು ಎಂಬಲ್ಲಿ ವಿಪರೀತ ಮದ್ಯಪಾನಿ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ, ಮೃತ ಯುವಕ ನಾಗರಾಜ ಆಚಾರ್ಯ (35). ಅವರು ರುದ್ರಯ್ಯ ಆಚಾರ್ಯ ಎಂಬವರ ಮಗ. ಅವರಿಗೆ ಕಳೆದ ಕೆಲವು ವರ್ಷಗಳಿಂದ ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಇದ್ದು, ಗುರುವಾರ ಬೆಳಗ್ಗೆ 9 ಗಂಟೆಗೆ ಮನೆ ಸಮೀಪದ ಹಾಡಿಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡರು. ಮನೆಯವರು ನೋಡಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಅವರ ಸಹೋದರ ಕೃಷ್ಣಮೂರ್ತಿ ಆಚಾರ್ಯ ನೀಡಿದ ದೂರಿನಂತೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಕಲ್ಲು ಕ್ವಾರಿಗೆ ದಾಳಿ
ಉಪ್ಪಿನಂಗಡಿ: ಅಕ್ರಮವಾಗಿ ನಡೆಯುತ್ತಿದ್ದ ಕೆಂಪುಕಲ್ಲಿನ ಕ್ವಾರಿಗೆ ಕಡಬ ವಿಶೇಷ ತಹಸೀಲ್ದಾರ್ ನೇತೃತ್ವದಲ್ಲಿ ಕಂದಾಯ ಇಲಾಖಾಧಿಕಾರಿಗಳ ತಂಡ ಗುರುವಾರ ಸಂಜೆ ದಾಳಿ ನಡೆಸಿ ಒಂದು ಲಾರಿ ಹಾಗೂ ಗಣಿಗಾರಿಕೆ ನಡೆಸಲು ಉಪಯೋಗಿಸುವ ಪರಿಕರಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿದ ಘಟನೆ ಕೊಯ್ಲದಲ್ಲಿ ನಡೆದಿದೆ. ಕೊಯ್ಲ ಗ್ರಾಮದ ಸಬಳೂರು, ಏಣಿತಡ್ಕ ಸಮೀಪದ ಕಕ್ವೆ ಎಂಬಲ್ಲಿ ಕ್ರಮ ಕೆಂಪುಕಲ್ಲಿನ ಕ್ವಾರಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕಡಬ ವಿಶೇಷ ತಹಸೀಲ್ದಾರ ಬಿ.ಸಿ ಶಿವಪ್ಪ , ಕಂದಾಯ ಇಲಾಖಾ ಅಧಿಕಾರಿ ನಾರಾಯಣ, ಗ್ರಾಮಕರಣಿಕ ರವೀಂದ್ರ ತಂಡ ದಾಳಿ ನಡೆಸಿದೆ. ಕಾರ್ಯಾಚರಣೆ ವೇಳೆ ಸ್ಥಳದಲ್ಲಿದ್ದ ಇಬ್ಬರು ಗಣಿಮಾಲೀಕರು ಪರಾರಿಯಾಗಿದ್ದು ಇನ್ನುಳಿದ ಇಬ್ಬರಿಗೆ ತಲಾ ರು. 50 ಸಾವಿರ ದಂಡ ವಿಧಿಸಲಾಗಿದೆ. ಕೆಂಪು ಕಲ್ಲಿನ ಗಣಿಗಾರಿಕೆಯಲ್ಲಿ ಯಾವುದೇ ಕಾನೂನು ಪಾಲನೆಯಾಗದಿದ್ದರಿಂದ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಭಾಗದಲ್ಲಿ ಇನ್ನಷ್ಟು ಅಕ್ರಮ ಗಣಿಕಾರಿಕೆಯ ಬಗ್ಗೆ ನಡೆಯುತ್ತಿರುವ ಬಗ್ಗೆ ಮಾಹಿತಿ ಸಾರ್ವಜನಿಕರಿಂದ ತಿಳಿದುಬಂದಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಯಾಚರಣೆ ನಡೆಸಿದ ವಿಶೇಷ ತಹಸೀಲ್ದಾರ್ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

