ದೈವಸ್ಥಾನ ವ್ಯವಸ್ಥಾಪನಾ ಸಮಿತಿ ವಿರುದ್ಧ ಜನಾಂದೋಲನಾ ಸಭೆ
ಬಂಟ್ವಾಳ: ಕಳ್ಳಿಗೆ ಗ್ರಾಮದ ಶ್ರೀಕನಪಾಡಿತ್ತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದ ವ್ಯವಸ್ಥಾಪನ ಸಮಿತಿ ಅವ್ಯವಸ್ಥೆ ಖಂಡಿಸಿ ಪೆರಿಯೋಡಿ ಬೀಡಿನ ಬಾಕಿಮಾರ್ ಗದ್ದೆಯಲ್ಲಿ ಬೃಹತ್ ಜನಾಂದೋಲನಾ ಸಭೆ ನಡೆಯಿತು.
ಪ್ರತಿಭಟನೆಗೆ ಸ್ಪಂದಿಸದ ಮಂಗಳೂರು ಸಹಾಯಕ ಕಮಿಷನರ್ ಅವರ ನಿರ್ಲಕ್ಷ್ಯ ಧೋರಣೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಕ್ಷೇತ್ರದ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಡಿ. 20ರವರೆಗೆ ಗಡುವು ನೀಡಿದೆ. ಈ ದಿನಾಂಕದೊಳಗಾಗಿ ಸಹಾಯಕ ಆಯುಕ್ತರು ಕ್ಷೇತ್ರದ ವಠಾರದಲ್ಲಿ ಇಲ್ಲಿನ ಭಕ್ತರು, ಜೀರ್ಣೋದ್ಧಾರ ಸಮಿತಿ, ಪಾರಿಚಾರಕರ ಸಮಕ್ಷಮದಲ್ಲಿ ಸಭೆ ನಡೆಸಿ ಇಲ್ಲಿನ ಅವ್ಯವಸ್ಥೆ ಹಾಗೂ ಅವ್ಯವಹಾರವನ್ನು ಸರಿಪಡಿಸದಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.
ಧರಣಿ: ಬೆಳಗ್ಗೆಯಿಂದ ಮಧ್ಯಾಹ್ನ ಸುಮಾರು 2 ಗಂಟೆವರೆಗೆ ಪೆರಿಯೋಡಿ ಬೀಡಿನ ಬಾಕಿಮಾರು ಗದ್ದೆಯಲ್ಲಿ ನಡೆದ ಪ್ರತಿಭಟನಾ ಸಭೆಗೆ ಅಧಿಕಾರಿ ಬಾರದೆ ನಿರ್ಲಕ್ಷ್ಯ ತೋರಿದರಂದ ಉದ್ರಿಕ್ತರಾದ ಪ್ರತಿಭಟನಾಕಾರರು ಅಲ್ಲಿಂದ ಸುಮಾರು 5 ಕಿ.ಮೀ. ದೂರದಲ್ಲಿರುವ ಬಿ.ಸಿ. ರೋಡಿನ ತಾಲೂಕು ಕಚೇರಿವರೆಗೆ ಪಾದಯಾತ್ರೆ ಮೂಲಕ ಸಾಗಿಬಂದು ಧರಣಿ ಕುಳಿತರು.
ಈ ಸಂದರ್ಭ ಪ್ರತಿಭಟನಾಕಾರರು ತಾಲೂಕು ಕಚೇರಿಯ ಒಳಗೆ ನುಗ್ಗಲು ಯತ್ನಿಸಿದರಾದರೂ ಪೊಲೀಸರು ಕಚೇರಿಯ ಗೇಟಿನ ಎದುರು ತಡೆದರು.
ತಾ.ಪಂ. ಮಾಜಿ ಉಪಾಧ್ಯಕ್ಷ ಪುರುಷ ಎನ್. ಸಾಲ್ಯಾನ್ ನೆತ್ತರೆಕೆರೆ ಮಾತನಾಡಿದರು. ತಹಸೀಲ್ದಾರ್ ಮಲ್ಲೇಸ್ವಾಮಿ ಪ್ರತಿಭಟನಕಾರರ ಬಳಿ ಆಗಮಿಸಿ ಮನವಿ ಸ್ವೀಕರಿಸಿ ಈ ಬಗ್ಗೆ ಜಿಲ್ಲಾಧಿಕಾರಿಗೆ ತಿಳಿಸುವುದಾಗಿ ತಿಳಿಸಿದ ಮೇಲೆ ಪ್ರತಿಭಟನಾಕಾರರು ಸ್ಥಳದಿಂದ ತೆರಳಿದರು.
ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶಶಿಧರ ಬ್ರಹ್ಮರಕೂಟ್ಲು, ದಿವಾಕರ ಶೆಟ್ಟಿ ಪರಾರಿ ಗುತ್ತು, ರಮಾನಾಥ ರೈ ಕುಪ್ಪಿಲ, ಶೋಭಾ ಶೆಟ್ಟಿ, ಪ್ರಮುಖರಾದ ಚರಣ್ ಜುಮಾದಿಗುಡ್ಡೆ, ದಾಮೋದರ ನೆತ್ರಕೆರೆ, ರೂಪೇಶ್ ಜ್ಯೋತಿಗುಡ್ಡೆ, ಕಿರಣ್ ಕುಮಾರ್, ದಿವಾಕರ ಶೆಟ್ಟಿ ಕುಪ್ಪಿಲ, ವಿಠಲ ಶೆಟ್ಟಿ ಕುಪ್ಪಿಲ ಗುತ್ತು, ಜಗನ್ನಾಥ ಶೆಟ್ಟಿ, ಮನೋಹರ ಶೆಟ್ಟಿ, ಪ್ರವೀಣ್ ತುಂಬೆ, ಮಾಧವ ವಳವೂರು, ಹರಿನಾಥ ಭಂಡಾರಿ ವಳವೂರು ಗುತ್ತು, ನಾರಾಯಣ ಹೊಳ್ಳ, ಮನೋಜ್ ವಳವೂರು, ಮಹೇಶ್ ಶೆಟ್ಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

