ವೃತ್ತಿಪರ ಸಂಸ್ಥೆಗಳ ಪ್ರವೇಶ, ಶುಲ್ಕ ನಿರ್ಧಾರ ಕಾಯ್ದೆ ಮುಂದಿನ ವರ್ಷದಿಂದ ಜಾರಿ: ಡಾ.ಶರಣ್ ಪ್ರಕಾಶ್
ಮಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶಿಸಿದ 2006ರ ವೃತ್ತಿಪರ ಸಂಸ್ಥೆಗಳ ಪ್ರವೇಶ ಮತ್ತು ಶುಲ್ಕ ನಿರ್ಧಾರ ಕಾಯ್ದೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದರು.
ಟಿಎಂಎಪೈ ಸಭಾಂಗಣದಲ್ಲಿ ಮಂಗಳವಾರ ಮೆಡಿಕಿಟ್, ಎಸ್ಆರ್ಎಸ್ ಗ್ಲೋಬಲ್ ಸೆಲ್ಯೂಶನ್ಸ್ ಆಯೋಜಿಸಿದ್ದ ಮೂರು ದಿನಗಳ ವೈದ್ಯಕೀಯ ಸಲಕರಣೆಗಳ ಪ್ರದರ್ಶನ ಮತ್ತು ಮಾರಾಟ ಮೇಳ, ವೈದ್ಯಕೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ವೃತ್ತಿಪರ ಸಂಸ್ಥೆಗಳ ಕಾಯ್ದೆ ಜಾರಿಗೊಳಿಸಲು ವಿಳಂಬವಾಗಿದೆ. ಈಗಿನ ವ್ಯವಸ್ಥೆಯಿಂದ ಬಡ, ಮಧ್ಯಮವರ್ಗದ ವಿದ್ಯಾರ್ಥಿಗಳು ಉಚಿತ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದರೂ ಆರ್ಥಿಕವಾಗಿ ಹಿಂದುಳಿದು ವೃತ್ತಿ ಶಿಕ್ಷಣ ವಿದ್ಯಾರ್ಥಿಗಳು ಹಿಂದಕ್ಕೆ ಸರಿಯುವಂತಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ 2006ರ ಶೈಕ್ಷಣಿಕ ನೀತಿ ಜಾರಿಗೊಳಿಸಲಿದೆ ಎಂದರು.
2006ರ ಕಾಯಿದೆಯನ್ವಯ ಎರಡು ರೀತಿಯಲ್ಲಿ ವಿದ್ಯಾರ್ಥಿಗಳ ಆಯ್ಕೆ ನಡೆಯಲಿದೆ. ಎರಡು ಸಮಿತಿ ರಚಿಸಲಾಗಿದ್ದು, ಸ್ಥಿರ ಶುಲ್ಕ, ನೋಂದಣಿ ವಿಧಾನ ನಿರ್ಧರಿಸಲಾಗುವುದು. ಪರೀಕ್ಷೆ ಕೈಗೊಳ್ಳಲು ಸರ್ಕಾರ ಪೂರ್ಣ ಹೊಣೆ ಹೊತ್ತುಕೊಳ್ಳಲಿದೆ.
ಉತ್ತಮ ಸೌಲಭ್ಯ ಇರುವ ಆಶ್ಪತ್ರೆಗಳನ್ನು ಒದಗಿಸಲು ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸುವ ಗುರಿ ಹೊಂದಲಾಗಿದೆ. ಇದರಿಂದ ಬಡ ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣಕ್ಕೆ ಅವಕಾಶ ಸಿಗುತ್ತದೆ. ಪ್ರಾದೇಶಿಕ ಮಟ್ಟದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸುವ ಮೂಲಕ ಭ್ರಷ್ಟಾಚಾರ ಮುಕ್ತ ಇಲಾಖೆ ಮಾಡುವ ಉದ್ದೇಶ ಇದೆ ಎಂದರು.
ಯುನಿಟಿ ಸಂಸ್ಥೆ ಡಾ.ಸಿ.ಪಿ.ಹಬೀಬ್ ರೆಹಮಾನ್, ಕಣ್ಣೂರು ಮೆಡಿಕಲ್ ಕಾಲೇಜ್ ಆಡಳಿತ ನಿರ್ದೇಶಕ ಡಾ.ಎಂ.ಎ.ಹಶೀಮ್ ಇತರರು ಇದ್ದರು. ಸಂಘಟನೆ ಕಾರ್ಯದರ್ಶಿ ಡಾ.ದೇವಿಪ್ರಸಾದ್ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

