ದಕ್ಷಿಣ ಕನ್ನಡ

ಟಿಪ್ಪರ್ ಡಿಕ್ಕಿ: ಪಾದಚಾರಿಗೆ ಗಾಯ

Published On :

ಉಪ್ಪಿನಂಗಡಿ: ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕೋಡಿಂಬಾಳ ಪಾದರೆ ನಿವಾಸಿ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಾಹನ ಚಾಲಕ ಜತ್ತಪ್ಪ ಗಾಯಗೊಂಡವರು. ಇವರು ಬುಧವಾರ ರಾತ್ರಿ ಓಂತ್ರಡ್ಕ ಬಳಿಯಿಂದ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಂಜ ಕಡೆಯಿಂದ ಕಡಬ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆಯಿತು ಎನ್ನಲಾಗಿದೆ. ಘಟನೆ ಸಂಭವಿಸಿದಾಕ್ಷಣ ಟಿಪ್ಪರ್ ಲಾರಿ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಲೆತ್ನಿಸಿದಾಗ ಮರ್ಧಾಳದಲ್ಲಿ ಆತನನ್ನು ಸ್ಥಳೀಯರು ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳು ಜತ್ತಪ್ಪನವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಡಿಕ್ಕಿ: ಪಾದಚಾರಿಗೆ ಗಾಯ
ಉಪ್ಪಿನಂಗಡಿ: ಇಲ್ಲಿನ ಬೈಪಾಸ್ ರಸ್ತೆ ರಾ.ಹೆ. 75ರಲ್ಲಿ ಗುರುವಾರ ರಾತ್ರಿ ಬೈಕ್ ಡಿಕ್ಕಿಯಾಗಿ ಪಾದಚಾರಿ, ಗಂಡಿಬಾಗಿಲು ನಿವಾಸಿ ಮುದ್ದ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಿಂದ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಆತನ ಹೆಸರು, ವಿಳಾಸ ತಿಳಿದುಬಂದಿಲ್ಲ. ಗಾಯಾಳು ಮುದ್ದ ಬಿಎಸ್‌ಎನ್‌ಎಲ್ ನಿವೃತ್ತ ಉದ್ಯೋಗಿ ಎಂದು ತಿಳಿದುಬಂದಿದೆ.
ಯುವತಿ ನಾಪತ್ತೆ
ಉಪ್ಪಿನಂಗಡಿ: ಇಲ್ಲಿನ ಗಾಂಧಿಪಾರ್ಕ್ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ರಮ್ಲತ್ (20) ಎಂಬಾಕೆ ನಾಪತ್ತೆಯಾಗಿರುವ ಯುವತಿ. ಈಕೆ ತನ್ನ ಮನೆಯವರೊಂದಿಗೆ ಸಾಮಗ್ರಿ ಖರೀದಿಗೆಂದು ಪೇಟೆಗೆ ಹೋದಾಕೆ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಸಹೋದರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.