ಮೂಲ್ಕಿ: ನಾಳೆಯಿಂದ ವಿಜಯ ಕಾಲೇಜು ಸುವರ್ಣ ಮಹೋತ್ಸವ
ಮೂಲ್ಕಿ: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಮೂಲ್ಕಿಯ ವಿಜಯ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.21ರಿಂದ 30ವರೆಗೆ ಜರುಗಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಎಂ.ಎ.ಆರ್. ಕುಡ್ವ ಹೇಳಿದ್ದಾರೆ.
ಕಾಲೇಜಿನ ಸುವರ್ಣ ಮಹೋತ್ಸವ ಸವಿ ನೆನಪಿಗಾಗಿ ಸುಮಾರು ರು. 5 ಕೋಟಿ ವೆಚ್ಚದಲ್ಲಿ 1600 ಆಸನದ ಸುಸಜ್ಜಿತ ಸಭಾಂಗಣ ನಿರ್ಮಿಸಲು ನಿರ್ಧರಿಸಿದ್ದು, ಈಗಾಗಲೇ ರು. 1 ಕೋಟಿ ಸಂಗ್ರಹವಾಗಿದೆ. ನೆಲ ಅಂತಸ್ತು ಸಂಪೂರ್ಣಗೊಂಡಿದ್ದು, ಹಳೆ ವಿದ್ಯಾರ್ಥಿಗಳ ಹಾಗೂ ದಾನಿಗಳ ಸಹಕಾರದಿಂದ ಯೋಜನೆಯನ್ನು ಮುಂದಿನ ವರ್ಷದಲ್ಲಿ ಸಂಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಲೇಜಿನ 500 ಬಡ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಚಿತ ಊಟ, 500 ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಶುಲ್ಕದಲ್ಲಿ ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿವಿಧ ಕಾರ್ಯಕ್ರಮ: ಡಿ.21ರಂದು ಬೆಳಗ್ಗೆ ಸುವರ್ಣ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆ ಜರುಗಲಿದ್ದು, ನಿಟ್ಟೆ ವಿಶ್ವ ವಿದ್ಯಾನಿಲಯ ಕುಲಪತಿ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಯುಜಿಸಿಯ ಬೆಂಗಳೂರಿನ ಎಸ್.ಡಬ್ಲ್ಯೂ.ಆರ್.ಒ. ಕಾರ್ಯದರ್ಶಿ ಡಾ. ಗೋಪು ಕುಮಾರ್ ಜಿಮ್ ಉದ್ಘಾಟಿಸಲಿದ್ದು, ಯುವಜನ ಸೇವೆ ಮತ್ತು ಮೀನುಗಾರಿಕಾ ಇಲಾಖೆ ಮುಖ್ಯ ಕಾರ್ಯದರ್ಶಿ ಡಾ. ನಾಗಾಂಬಿಕಾ ದೇವಿ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಲಿದ್ದಾರೆ.
22ರಂದು ಬೆಶಗ್ಗೆ ಕಾಲೇಜು ಸಿಬ್ಬಂದಿ ಮತ್ತು ಹಳೆ ವಿದ್ಯಾರ್ಥಿಗಳ ಕ್ರೀಡೋತ್ಸವ ಜರುಗಲಿದ್ದು, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಉದ್ಘಾಟಿಸಲಿದ್ದಾರೆ. 23ರಂದು ಕಾಲೇಜಿನ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡೋತ್ಸವ, 24ರಂದು ಬೆಳಗ್ಗೆ ವಸ್ತು ಪ್ರದರ್ಶನದ ಉದ್ಘಾಟನೆ ನಡೆಯಲಿದೆ.
26ರಂದು ಬೆಳಗ್ಗೆ ಸುವರ್ಣ ಮಹೋತ್ಸವ ಆಚರಣೆ ಜರುಗಲಿದ್ದು, ಬಪ್ಪನಾಡು ದೇವಳದಿಂದ ಕಾಲೇಜಿನವರೆಗೆ ಮೆರವಣೆಗೆ ಜರುಗಲಿದೆ. ರಾಜ್ಯ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಸುವರ್ಣ ಮಹೋತ್ಸವ ವೇದಿಕೆ ಉದ್ಘಾಟಿಸಲಿದ್ದಾರೆ.
27ರಂದು ಬೆಳಗ್ಗೆ ಕಾಲೇಜಿನ ಸ್ಥಾಪಕರ ದಿನಾಚರಣೆ, 28ರಂದು ಬೆಳಗ್ಗೆ ಕಾಲೇಜಿನ ವಿದ್ಯಾರ್ಥಿ ಸಂಘಗಳ ವಾರ್ಷಿಕೋತ್ಸವ, 29ರಂದು ಮಧ್ಯಾಹ್ನ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕೋತ್ಸವ ನಡೆಯಲಿದೆ.
30ರಂದು ಜರುಗಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಕೆ.ಆರ್. ಶಂಕರ್ ತಿಳಿಸಿದರು.
ಆಡಳಿತ ಸಮಿತಿ ಸದಸ್ಯರಾದ ಡಾ.ಕೆ.ಪಿ. ಮಧ್ಯಸ್ಥ, ವಿ. ವಿಶ್ವನಾಥ ಕಾಮತ್, ಯು. ನಾಗೇಶ್ ಶೆಣೈ, ಸತೀಶ್ ಕಾಮತ್, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪಮೀದಾ ಬೇಗಂ, ಹಳೆ ವಿದ್ಯಾರ್ಥಿ ಸಂಘದ ಶಮೀನಾ ಆಳ್ವ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾರಾಯಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

