ದಕ್ಷಿಣ ಕನ್ನಡ

ಇಂದು ಜೋಡುಕರೆ ಕಂಬಳ

Published On :

ಮೂಲ್ಕಿ: ಮೂಲ್ಕಿ ಸೀಮೆ ಅರಸು ಕಂಬಳ ಸಮಿತಿ ಆಶ್ರಯದಲ್ಲಿ ಮೂಲ್ಕಿ ಸೀಮೆ ಅರಸು ಜೋಡುಕರೆ ಕಂಬಳವು ಡಿ.21ರಂದು ಪಡುಪಣಂಬೂರಿನ ಮೂಲ್ಕಿ ಸೀಮೆ ಅರಸರ ಅರಮನೆ ಎದುರಿನ ಬಾಕಿಮಾರು ಗದ್ದೆಯಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ ಕಂಬಳವನ್ನು ಸುರತ್ಕಲ್‌ನ ಪ್ರಗತಿಪರ ಕೃಷಿಕ ಕೆ. ಗೋಪಾಲಕೃಷ್ಣ ಪ್ರಭು ಉದ್ಘಾಟಿಸಲಿದ್ದಾರೆ. ಸಂಜೆ ಜರುಗಲಿರುವ ಸಭಾ ಕಾರ್ಯಕ್ರಮದಲ್ಲಿ ಸಾಧಕರಾದ ಸಹಕಾರ ರತ್ನ ಪ್ರಶಸ್ತಿ ವಿಜೇತ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮೂಲ್ಕಿ ಪಯ್ಯೊಟ್ಟು ಸದಾಶಿವ ಸಾಲ್ಯಾನ್ ಅವರನ್ನು ಸನ್ಮಾನಿಸಲಾಗುವುದು. ಸಚಿವ  ಅಭಯಚಂದ್ರ ಜೈನ್, ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಕೊಳಕೆ ಇರ್ವತ್ತೂರು ಭಾಸ್ಕರ ಎಸ್. ಕೋಟ್ಯಾನ್ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ. ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೆ 6 ವಿಭಾಗಗಳಲ್ಲಿ ಸ್ಪರ್ಧೆಯಿದ್ದು, ಕೆನೆ ಹಲಗೆ, ಹಗ್ಗ ಹಿರಿಯ, ನೇಗಿಲು ಹಿರಿಯ ಮತ್ತು ಅಡ್ಡಹಲಗೆಯಲ್ಲಿ ಪ್ರಥಮಸ್ಥಾನಿಗೆ ಒಂದೂವರೆ ಪವನ್ ಚಿನ್ನ, ದ್ವಿತೀಯ 6 ಗ್ರಾಂ ಚಿನ್ನ, ಹಗ್ಗ ಕಿರಿಯ ಹಾಗೂ ನೇಗಿಲು ಕಿರಿಯದಲ್ಲಿ ಪ್ರಥಮ ಸ್ಥಾನಿಗೆ 6 ಗ್ರಾಂ ಚಿನ್ನ, ದ್ವಿತೀಯ ಸ್ಥಾನಿಗೆ 3 ಗ್ರಾಂ ಚಿನ್ನ ನೀಡಲಾಗುವುದು ಎಂದು ಸಮಿತಿಯ ಅಧ್ಯಕ್ಷ ಕೊಲ್ನಾಡುಗುತ್ತು ರಾಮಚಂದ್ರ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.