ದಕ್ಷಿಣ ಕನ್ನಡ

ಶೀಘ್ರ ಅಕ್ರಮ ಸಕ್ರಮ ಹಕ್ಕುಪತ್ರ ವಿತರಣೆ: ಸೊರಕೆ

Published On :

ಕಾಪು: ಉಡುಪಿ ತಾಲೂಕಿನಲ್ಲಿ ಅಕ್ರಮ ಸಕ್ರಮ ಸಮಿತಿ ಈಗಾಗಲೇ ರಚಿಸಲಾಗಿದ್ದು, ಬಾಕಿ ಇರುವ 8 ಸಾವಿರ ಅರ್ಜಿಗಳನ್ನು ಸಮಿತಿ ಪರಿಶೀಲಿಸಿದ ಬಳಿಕ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.
ಅವರು ಕಾಪು ವೀರಭದ್ರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಉಡುಪಿ ತಾಲೂಕು ಕಾಪು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಮಂಜೂರಾತಿ ಪತ್ರ ವಿತರಣೆ ಉದ್ಘಾಟಿಸಿ ಮಾತನಾಡಿದರು.
 ಖಾಲಿ ಇರುವ ಕಂದಾಯ ಇಲಾಖಾ ಸಿಬ್ಬಂದಿ ನೇಮಕ ಮಾಡಲು ಇಲಾಖಾ ಅಧಿಕಾರಿಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅದೇಶ ನೀಡಲಾಗಿದೆ. ಅದೇ ರೀತಿ ಸರ್ವೇಯರ್ ಮತ್ತು ಗ್ರಾಮಕರಣಿಕರ ಹುದ್ದೆಗಳಿಗೆ ನೇಮಕಾತಿಯನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಸಚಿವ ಸಂಪುಟ ನೀಡುವ ತೀರ್ಮಾನಗಳನ್ನು ಗಮನಿಸಿ, ಜನತೆಗೆ ತೊಂದರೆಯಾಗದಂತೆ ವರದಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಕಾಪು ಕ್ಷೇತ್ರದಲ್ಲಿ 1000 ಬಡವರಿಗೆ ಮನೆ ನಿವೇಶನ ವಿತರಣೆ, ಮೀನುಗಾರರಿಗೆ ಹೆಚ್ಚಿನ ಅನುದಾನ ನೀಡುವುದು, ಶಿರ್ವದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಯೋಗಾಲಯ ಸ್ಥಾಪನೆ, ಬೆಳಪಿನಲ್ಲಿ ಮಂಗಳೂರು ವಿವಿ ಪಿ.ಜಿ. ಕೇಂದ್ರ ಸ್ಥಾಪನೆ, ಹಿರಿಯಡಕದಲ್ಲಿ ನೂತನ ನಾಡ ಕಚೇರಿ ಪ್ರಾರಂಭ ಸೇರಿದಂತೆ ಈ ಪ್ರದೇಶದ ಸರ್ವತೋಮುಖ ಪ್ರಗತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಕುಂದಾಪುರ ಉಪವಿಭಾಗಾಧಿಕಾರಿ ಯೋಗೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಐಡಾ ಗಿಬ್ಬ ಡಿಸೋಜ, ತಾಪಂ ಸದಸ್ಯರಾದ ಶ್ರೀಕರ ಅಂಚನ್, ಸುಮನಾ ಕಿಶೋರ್, ಪ್ರೆಸಿಲ್ಲಾ ಡಿಮೆಲ್ಲೋ, ಭಾಸ್ಕರ ಇದ್ದರು.
ಉಡುಪಿ ತಹಸೀಲ್ದಾರ್ ಟಿ.ಜಿ. ಗುರುಪ್ರಸಾದ್ ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.  ಸಚಿವರು 192 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಜಿ ಸಲ್ಲಿಸಿದ್ದ 92 ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹರಿಗೆ ಸ್ಥಳದಲ್ಲೇ ಮಂಜೂರಾತಿ ಪತ್ರ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.