ಶಾಲೆ, ಕಾಲೇಜು ಬಂದ್ ಮಾಡದವರ ವಿರುದ್ಧ ಪ್ರತಿಭಟನೆ
ಮಂಗಳೂರು: ರಾಷ್ಟ್ರಕವಿ ಡಾ. ಜಿಎಸ್ಎಸ್ ನಿಧನ ಹಿನ್ನೆಲೆಯಲ್ಲಿ ಮಂಗಳವಾರ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ ತರಗತಿ ನಡೆಸಿದ ಶಾರದಾ ಕಾಲೇಜು ಮತ್ತು ಎಕ್ಸ್ಪರ್ಟ್ ಕಾಲೇಜುಗಳ ಮುಂಭಾಗದಲ್ಲಿ ಕನ್ನಡ ಕಟ್ಟೆ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾರದಾ ಕಾಲೇಜಿನಲ್ಲಿ ಪ್ರತಿಭಟಿಸುತ್ತಿದ್ದ ವೇಳೆ ಉಪನ್ಯಾಸಕರೊಬ್ಬರು 'ಜಿಎಸ್ಎಸ್ ಎಂದರೆ ಯಾರು ಬರೆದು ಕೊಡಿ, ಆಮೇಲೆ ನೋಡೋಣ' ಎಂದು ಉಡಾಫೆಯಾಗಿ ಮಾತನಾಡಿರುವುದು ಕಾರ್ಯಕರ್ತರನ್ನು ಕೆರಳಿಸಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಎಂ.ಬಿ.ಪುರಾಣಿಕ್, ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ರಜೆ ನೀಡುವುದಾಗಿ ಹೇಳಿದರು. ಎಕ್ಸ್ಪರ್ಟ್ ಕಾಲೇಜಿನಲ್ಲಿಯೂ ಬಳಿಕ ರಜೆ ಘೋಷಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

