ದಕ್ಷಿಣ ಕನ್ನಡ

28ರಂದು ನೂಜಿಬಾಳ್ತಿಲ ಶಾಲೆ ವಜ್ರಮಹೋತ್ಸವ

Published On :

ಉಪ್ಪಿನಂಗಡಿ: ನೂಜಿಬಾಳ್ತಿಲ ಉನ್ನತ ಹಿರಿಯ ಪ್ರಾಥಮಿಕ ಶಾಲೆ ವಜ್ರಮಹೋತ್ಸವ ಡಿ.28ರಂದು ನಡೆಯಲಿದೆ ಎಂದು ವಜ್ರಮಹೋತ್ಸವ ಸಮಿತಿ ಗೌರವಾಧ್ಯಕ್ಷ ಪಿ.ಪಿ. ವರ್ಗಿಸ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ಧ್ವಜವಂದನೆ ನಡೆಯಲಿದ್ದು, ಕಡಬ ಸಿಎ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ ಕೋಡಿಬೈಲು ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆಂಜಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಲ್ಲಾಳ್ ವಹಿಸಲಿದ್ದಾರೆ. ಶಿಕ್ಷಣ ಇಲಾಖೆ ಪುತ್ತೂರು ಕ್ಷೇತ್ರ ಸಮನ್ವಯಧಿಕಾರಿ ಹರಿಕಿರಣ್ ಕೊಯಿಲ, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ವಾಮಚ್ಚನ್, ಕಡಬ ಸಿಎ ಬ್ಯಾಂಕ್ ನಿರ್ದೇಶಕ ನಿತ್ಯಾನಂದ ಬೊಳ್ಳಾಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ವಲಯ ಮೇಲ್ವಿಚಾರಕಿ ಯಶೋಧ, ನೂಜಿಬಾಳ್ತಿಲ ಗ್ರಾ.ಪಂ ಕಾರ್ಯದರ್ಶಿ ಸುರೇಂದ್ರ ರೈ, ಶಾಲಾ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಪ್ರಮುಖರಾದ ಡಾ. ಬೇಬಿ ಮ್ಯಾಥ್ಯೂ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉದ್ಯಮಿ ಸ್ಯಾಮುವೆಲ್ ಜೋಸ್ ಬಹುಮಾನ ವಿತರಿಸಲಿದ್ದಾರೆ. ಸಾಯಂಕಾಲ ನಡೆಯುವ ಸಭಾ ಕಾರ್ಯಕ್ರಮವನ್ನು  ಕರ್ನಾಟಕ ಸರ್ಕಾರದ ಲೋಕೋಪಯೋಗಿ ಖಾತೆ ಸಚಿವ ಡಾ.ಎಚ್.ಸಿ. ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಸಚಿವ ರಮನಾಥ ರೈ ಸಾಧಕರಿಗೆ ಸನ್ಮಾನ ನೆರವೇರಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಸಂಚಾಲಕ ಅಬ್ರಾಹಂ ವರ್ಗಿಸ್ ಉಪನ್ಯಾಸ ನೀಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.