ಕ್ಯಾಂಪ್ಕೊ ಸ್ಥಾಪಕಾಧ್ಯಕ್ಷ ಸುಬ್ರಾಯ ಭಟ್ ನಿಧನ
ವಿಟ್ಲ: ಸಹಕಾರಿ ರಂಗದ ನೇತಾರ, ಕ್ಯಾಂಪ್ಕೋ ಸಂಸ್ಥೆ ಸ್ಥಾಪಕಾಧ್ಯಕ್ಷ ವಾರಣಾಸಿ ಸುಬ್ರಾಯ ಭಟ್ (87) ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಿಧನರಾದರು. ಅಸೌಖ್ಯ ಹಿನ್ನೆಲೆಯಲ್ಲಿ ಅವರನ್ನು ಡಿ.24ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಉಪಾಧ್ಯಕ್ಷ, ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ, ರಾಜ್ಯ ಮಾರುಕಟ್ಟೆ ಬೋರ್ಡ್ ಸದಸ್ಯ, ದ.ಕ. ಕೃಷಿಕರ ಮಾರಾಟ ಸಹಕಾರಿ ಸಂಘದ ಉಪಾಧ್ಯಕ್ಷ, ಅಧ್ಯಕ್ಷ, ನಿರ್ದೇಶಕ, ಕೊಕೊ ಮತ್ತು ಅಡಕೆ ಅಭಿವೃದ್ಧಿ ನಿಗಮ ಸದಸ್ಯ, ಕ್ಯಾಂಪ್ಕೋ ಅಧ್ಯಕ್ಷ, ಪಶ್ಚಿಮಘಟ್ಟ ಅಭಿವೃದ್ಧಿ ಸಲಹಾ ಸಮಿತಿ (ಕೇಂದ್ರ ಸರ್ಕಾರ) ಸದಸ್ಯ, ಕರ್ನಾಟಕ ಸಹಕಾರಿ ಸಂಘ ಆ್ಯಕ್ಟ್ ತಿದ್ದುಪಡಿ ಸಮಿತಿ ಸದಸ್ಯ, ಹಾಗೂ ಕರ್ನಾಟಕ ವ್ಯವಸಾಯೋತ್ಪನ್ನ ಮಾರುಕಟ್ಟೆ ಆಕ್ಟ್ ತಿದ್ದುಪಡಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

