ಖಾಸಗಿ ವೈದ್ಯರು ಗ್ರಾಮೀಣ ಸೇವೆಗೆ ಮುಂದಾಗಲಿ: ಸಚಿವ ಯು.ಟಿ. ಖಾದರ್
ಮಂಗಳೂರು: ಖಾಸಗಿ ವೈದ್ಯಕೀಯ ವ್ಯವಸ್ಥೆ ಗ್ರಾಮೀಣ ಪ್ರದೇಶಕ್ಕೆ ತೆರಳಿ ಸೇವೆ ಸಲ್ಲಿಸುವ ಮೂಲಕ ಉತ್ತಮ ಚಿಕಿತ್ಸೆ ನೀಡಿದಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಗಳೂರು ಹಾರ್ಟ್ಸ್ಕ್ಯಾನ್ ಫೌಂಡೇಷನ್ ವತಿಯಿಂದ ಪ್ರಾರಂಭಗೊಂಡ ಮಲ್ಟಿ ಸ್ಪೆಷಾಲಿಟಿ ಸೆಂಟರ್ನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಖಾಸಗಿ ವೈದ್ಯರು ಗ್ರಾಮೀಣ ಸೇವೆ ನೀಡುವಲ್ಲಿ ಆಸಕ್ತಿ ವಹಿಸಬೇಕು. ವಾರಕ್ಕೊಮ್ಮೆಯಾದರೂ ಉಚಿತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆರೋಗ್ಯ ಸೇವೆ ನೀಡಬೇಕು. ರೋಗಿಗಳ ಸಂಖ್ಯೆ ಕಡಿಮೆಗೊಳಿಸುವುದೇ ವೈದ್ಯಕೀಯ ವ್ಯವಸ್ಥೆಯ ಗುರಿಯಾಗಬೇಕು ಎಂದರು.
ಮಾಜಿ ಸಚಿವ ಕೃಷ್ಣ ಪಾಲೇಮಾರ್ ಮಾತನಾಡಿ, ವೈದ್ಯರಲ್ಲಿ ನಂಬಿಕೆ ಇಟ್ಟು ಜನರು ಬರುವಾಗ ಅವರನ್ನು ನಗುಮೊಗದಿಂದ ಬರಮಾಡಿಕೊಂಡು, ಮಾನಸಿಕ ಸ್ಥೈರ್ಯ ತುಂಬುವುದು ವೈದ್ಯರ ಕರ್ತವ್ಯ. ಜನತೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಹೊಸ ಸವಲತ್ತುಗಳಿಗೆ ನಗರ ಅವಕಾಶ ನೀಡುತ್ತಿದ್ದು, ನಗರ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂದರು. ಇದೇ ಸಂದರ್ಭ ನ್ಯೂರೊಲಾಜಿ, ನೆಫ್ರಲಾಜಿ, ಆರ್ಥೊಪೆಡಿಕ್ಸ್, ಯುರೊಲಾಜಿ, ಸ್ಕ್ಯಾನಿಂಗ್ ಸೆಂಟರ್ನಲ್ಲಿ ಇರುವ ಸೌಲಭ್ಯ ಮತ್ತಿತರ ವ್ಯವಸ್ಥೆಗಳನ್ನು ಉದ್ಘಾಟಿಸಲಾಯಿತು. ಈ ವ್ಯವಸ್ಥೆಗಳಿಂದ 5 ನಿಮಿಷದೊಳಗೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಬಹುದು ಎಂದು ಫೌಂಡೇಷನ್ ಅಧ್ಯಕ್ಷ ಡಾ.ಕೆ. ಮುಕುಂದ್ ವಿವರಿಸಿದರು. ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಅನಂತಕೃಷ್ಣ, ಮಲ್ಟಿ ಸ್ಪೆಷಾಲಿಟಿ ಸೆಂಟರ್ನ ಸಲಹೆಗಾರ ಕೆ. ಸುರೇಂದ್ರ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ನವೀನ್, ಫೌಂಡೇಶನ್ ನಿರ್ದೇಶಕ ಡಾ.ಎಚ್. ಪ್ರಭಾಕರ್, ರೇಡಿಯಾಲಾಜಿಸ್ಟ್ ಡಾ. ದೇವದಾಸ್ ಆಚಾರ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

