ದಕ್ಷಿಣ ಕನ್ನಡ

ಹೊಸ ವರ್ಷಾಚರಣೆ: ಅಸಭ್ಯ ವರ್ತನೆಗೆ ಕಾನೂನು ಕ್ರಮ

Published On :

ಮಂಗಳೂರು: 2014ರ ಹೊಸ ವರ್ಷ ಆಚರಣೆಯ ಸಂಬಂಧ ಮಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ ಸಂಘಸಂಸ್ಥೆಗಳಿಗೆ ಕಾನೂನು ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಡಿ. 31 ರಂದು ರಾತ್ರಿ ಆರಂಭವಾಗುವ ವರ್ಷಾಚರಣೆಯನ್ನು ಎಲ್ಲ ಸಂಘ ಸಂಸ್ಥೆಗಳು ರಾತ್ರಿ 12.30ರೊಳಗೆ ಹೊಟೇಲ್, ಕ್ಲಬ್‌ನ ಒಳಾವರಣದಲ್ಲಿ ಆಚರಿಸತಕ್ಕದ್ದು. ಅಬಕಾರಿ ಇಲಾಖೆಯಿಂದ ಅನುಮತಿ ಪಡೆದಿರಬೇಕು. ಇದನ್ನು ಪೊಲೀಸ್ ಠಾಣೆಯಲ್ಲಿ ಸಲ್ಲಿಸಿರಬೇಕು. ಸಾರ್ವಜನಿಕ ಸ್ಥಳದಲ್ಲಿ ಏರ್ಪಡಿಸಲಾಗುವ ವರ್ಷಾಚರಣೆಯಲ್ಲಿ ಧೂಮಪಾನ, ಮದ್ಯಪಾನ ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು, ಯುವಕರು ರಸ್ತೆಯಲ್ಲಿ ಅಸಭ್ಯವಾಗಿ ವರ್ತಿಸುವುದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಧ್ವನಿವರ್ಧಕದಲ್ಲಿ ಸೀಮಿತವಾಗಿರುವ ಬಾಕ್ಸ್‌ನ್ನು ಅಳವಡಿಸಿ, ಕಡಿಮೆ ಧ್ವನಿಯನ್ನು ಹೊಂದಿರಬೇಕು. ಶುಭಾಶಯ ಕೋರುವ ನೆಪದಲ್ಲಿ ವಿದ್ಯಾರ್ಥಿಗಳ ವಸತಿ ನಿಲಯ, ಮನೆಯ ಮುಂದೆ ಅಸಭ್ಯವಾಗಿ ವರ್ತಿಸುವುದು, ಬಾಟಲಿ ತೂರುವುದು ನಿಷೇಧಿಸಲಾಗಿದೆ. ಪಟಾಕಿ ಮತ್ತು ಸಿಡಿಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಾರ್ಯಕ್ರಮ ಆಯೋಜಿಸುವವರು ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗ್ನಿಶಾಮಕ ಉಪಕರಣ, ತುರ್ತು ಚಿಕಿತ್ಸಾ ವಾಹನ ಇನ್ನಿತರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ಸೂಚನೆಯನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.