ದಕ್ಷಿಣ ಕನ್ನಡ

ರಾಜಕೀಯ ದುರದ್ದೇಶದಿಂದ ಸಚಿವರ ಮೇಲೆ ಆರೋಪ: ಕಾಂಗ್ರೆಸ್

Published On :

ಮೂಲ್ಕಿ: ನಿಷ್ಕಳಂಕ ವ್ಯಕ್ತಿತ್ವ ಹೊಂದಿರುವ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಯುವಜನ ಮತ್ತು ಮೀನುಗಾರಿಕಾ ಸಚಿವರಿಗೆ ಕಳಂಕ ತರುವ ನಿಟ್ಟಿನಲ್ಲಿ ರಾಜಕೀಯ ದುರುದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಮೂಲ್ಕಿ ನಾಗರಿಕ ಸಮಿತಿ ಹೆಸರಿನಲ್ಲಿ ಪ್ರತಿಭಟನೆ ನಡೆಸಿ ದುರುದ್ದೇಶದಿಂದ ಆರೋಪ ಹೊರಿಸಿವೆ. ಈ ಬಗ್ಗೆ ಕ್ಷಮೆ ಯಾಚಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ತೀವ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಯ್ಯೊಟ್ಟು ಸದಾಶಿವ ಸಾಲ್ಯಾನ್ ತಿಳಿಸಿದ್ದಾರೆ.
ಮೂಲ್ಕಿಯಲ್ಲಿ, ಸೋಮವಾರ ಪ್ರತಿಭಟನೆ ವೇಳೆ ನಡೆದ ಘಟನೆಗೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ಮೂಲ್ಕಿ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು ಮೂಲ್ಕಿ ನಾಗರಿಕ ಸಮಿತಿ ಜತೆಗೂಡಿ ಬಡಪಾಯಿ ಚಾಲಕರನ್ನು ದುರುಪಯೋಗಪಡಿಸಿಕೊಂಡು ಸಚಿವರ ವಿರುದ್ಧ ಅವಹೇಳನಕಾರಿ ಮಾತನ್ನಾಡಿ ಅವರನ್ನು ರೊಚ್ಚಿಗೆಬ್ಬಿಸುವ ಕಾರ್ಯ ಮಾಡಿದ್ದಾರೆ. ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರ ಕುಮ್ಮಕ್ಕಿನಿಂದ ಈ ಘಟನೆ ನಡೆದಿದ್ದು ಸಚಿವರು ಯಾರ ಮೇಲೂ ಹಲ್ಲೆಗೆ ಮುಂದಾಗಿಲ್ಲ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಜನರ ಹಾದಿ ತಪ್ಪಿಸಲು ಇಂತಹ ಅವಕಾಶವನ್ನು ಉಪಯೋಗಿಸುತ್ತಿದ್ದು ಇದಕ್ಕೆ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.