ಅಡಕೆ ನಿಷೇಧ-ರೈತಪರ ಬಿಜೆಪಿ ಹೋರಾಟ: ಡೀವಿ
ಸುಳ್ಯ: ಅಡಕೆ ನಿಷೇಧ ವಿಚಾರದಲ್ಲಿ ರೈತನ ಪರವಾಗಿ ಹೋರಾಟ ನಡೆಸಲು ಬಿಜೆಪಿ ಸಿದ್ಧವಾಗಿದೆ. ಆದ್ದರಿಂದ ಪ್ರತಿಭಟನೆಗೆ ಎಲ್ಲ ರೈತರು ಕೈಜೋಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಡಿ.ವಿ. ಸದಾನಂದ ಗೌಡರು ವಿನಂತಿಸಿದ್ದಾರೆ.
ಅಡಕೆ ನಿಷೇಧ ಪ್ರಸ್ತಾಪದ ವಿರುದ್ಧ ಗುರುವಾರ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯ ಪೂರ್ವಭಾವಿಯಾಗಿ ಸುಳ್ಯ, ದೊಡ್ಡತೋಟ, ಆಲೆಟ್ಟಿ ಮತ್ತು ಸಂಪಾಜೆಯಲ್ಲಿ ಪ್ರಚಾರ ಸಭೆಗಳು ಸದಾನಂದ ಗೌಡ ಉಪಸ್ಥಿತಿಯಲ್ಲಿ ನಡೆದಿದ್ದು, ಇಲ್ಲಿನ ಸಿ.ಎ. ಬ್ಯಾಂಕ್ ಸಭಾಭವನದಲ್ಲಿ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದ ಸುಮಾರು 12 ಜಿಲ್ಲೆಗಳಲ್ಲಿ 2 ಲಕ್ಷ ಕುಟುಂಬದವರು ಅಡಕೆ ಬೆಳೆದು ಜೀವನ ನಡೆಸುತ್ತಿದ್ದಾರೆ. ಇನ್ನೂ 5 ಲಕ್ಷ ಕುಟುಂಬಗಳು ಅಡಕೆಯನ್ನು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ದ.ಕ.ದಲ್ಲಿ ಪಟ್ಟಣ ಪ್ರದೇಶ ಹೊರತು ಪಡಿಸಿ ಉಳಿದೆಲ್ಲ ಜನ ಅಡಕೆ ಕೃಷಿಯನ್ನೇ ಅವಲಂಬಿಸುತ್ತಿದ್ದಾರೆ. ರೈತನ ಜೀವನಾಡಿಯಾಗಿರುವ ಈ ಬೆಳೆಯ ನಿಷೇಧಕ್ಕೆ ಬಿಜೆಪಿ ಯಾವತ್ತೂ ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಎ.ವಿ.ತೀರ್ಥರಾಮ, ಸಂಜೀವ ಮಠಂದೂರು, ಐ.ಬಿ. ಚಂದ್ರಶೇಖರ್, ಪಿ.ಕೆ. ಉಮೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

