ಜಿಲ್ಲಾ ಕೇಂದ್ರಗಳಲ್ಲಿ ಸಿಂಥೆಟಿಕ್ ಟ್ರ್ಯಾಕ್: ಜೈನ್
ಮಂಗಳೂರು: ಭವಿಷ್ಯದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಯುವಜನ ಸೇವಾ ಮತ್ತು ಕ್ರಿಡಾ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ.
ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಪತ್ರಿಕಾ ಸಂವಾದದಲ್ಲಿ ಮಾತನಾಡಿದರು.
ಪ್ರಸ್ತುತ 7 ಸಿಂಥೆಟಿಕ್ ಟ್ರ್ಯಾಕ್‌ಗಳಿದ್ದು, ನೂತನ 5 ಟ್ರ್ಯಾಕ್‌ಗಳ ಕಾಮಗಾರಿ ಪ್ರಗತಿಯಲ್ಲಿದೆ. ಯುವ ಸಂಘಟನೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ನೋಂದಣಿ ನವೀಕರಣಕ್ಕೆ ಕಾನೂನಿನಲ್ಲಿ ತಿದ್ದುಪಡಿ ತರಲು ಪ್ರಯತ್ನಿಸಲಾಗುತ್ತಿದೆ ಎಂದರು.
ಬಿಜಾಪುರದಲ್ಲಿ ರು. 7 ಕೋಟಿ ವೆಚ್ಚದಲ್ಲಿ ಸೈಕ್ಲಿಂಗ್ ವೆಲೋಡ್ರೋಂ ಕಾಮಗಾರಿ ನಡೆಯುತ್ತಿದೆ. ರು. 1.20 ಲಕ್ಷ ಮೌಲ್ಯದ 50 ಸೈಕಲ್‌ಗಳನ್ನು ಖರೀದಿಸಿದ್ದು, ಮುಂದಿನ ವಾರದಲ್ಲಿ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದರು. ಬೆಂಗಳೂರು ಕಂಠೀರವ ಕ್ರೀಡಾಂಗಣ ಆವರಣದಲ್ಲಿ ರು. 3 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಬ್ಯಾಡ್‌ಮಿಂಟನ್ ಕೋರ್ಟ್ ನಿರ್ಮಾಣ, ಮೈಸೂರು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರು. 3.70 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್, ಮೈಸೂರು ಮೂಡಾ ವತಿಯಿಂದ ಸಿಂಥೆಟಿಕ್ ಹಾಕಿ ಟರ್ಫ್ ನಿರ್ಮಿಸಿ ಉಪಯೋಗಕ್ಕೆ ನೀಡಲಾಗಿದೆ. ಗ್ರಾಮೀಣ ಕ್ರೀಡೆ ಪ್ರೋತ್ಸಾಹಕ್ಕೆ ಉತ್ತರ ಕರ್ನಾಟಕದಲ್ಲಿ 18 ಗರಡಿ ಮನೆ ನಿರ್ಮಾಣ, ಬೆಳಗಾವಿಯಲ್ಲಿ ಕುಸ್ತಿ ಅಕಾಡೆಮಿ, ಹೊಸ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು ಎಂದ ಅವರು, ಪ್ರಶಸ್ತಿ ವಿಜೇತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಶಿವಮೊಗ್ಗದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಉದ್ಘಾಟನೆಯಾಗಿದ್ದು, ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಫುಟ್ಬಾಲ್ ಕೃತಕ ಹಾಸು ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಮೂಡುಬಿದಿರೆಯ 28.5 ಎಕರೆ ಜಾಗದಲ್ಲಿ ಸಿಂಥೆಟಿಕ್ ಟ್ರ್ಯಾಕ್, ಅಂತಾರಾಷ್ಟ್ರೀಯ ಗುಣಮಟ್ಟದ ಒಳಾಂಗಣ ಕ್ರೀಡಾಂಗಣ, ಈಜುಕೊಳ, ಯುವ ಸಬಲೀಕರಣ ಕೇಂದ್ರವನ್ನು ರು. 15 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದರು.
ಮೀನುಗಾರಿಕೆಗೆ 71 ಕೋಟಿ ವೆಚ್ಚ: ಈ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಯೋಜನೆಗೆ ರು. 200.41 ಕೋಟಿ ಅನುದಾನ ಒದಗಿಸಲಾಗಿದ್ದು, ನವೆಂಬರ್‌ವರೆಗೆ ರು. 71.14 ಕೋಟಿ ವೆಚ್ಚ ಮಾಡಲಾಗಿದೆ. ಮೀನುಗಾರಿಕೆ ಇಲ್ಲದ ಅವಧಿಯಲ್ಲಿ 32742 ಮಂದಿ ಮೀನುಗಾರರಿಗೆ ಪರಿಹಾರ ನೀಡಲು ರು. 393.904 ಲಕ್ಷ ಮೊತ್ತ ಕಾದಿರಿಸಲಾಗಿದೆ ಎಂದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

