ವಿಕಲಚೇತನರ ಬಸ್ ಪಾಸ್ ನವೀಕರಣ ಸೂಚನೆ
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಿಕಲ ಚೇತನ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ.ವ್ಯಾಪ್ತಿಯಲ್ಲಿ ಪ್ರಯಾಣಿಸಲು ನೀಡಿರುವ ರಿಯಾಯ್ತಿ ದರದ ಬಸ್ ಪಾಸ್ಗಳ ಅವಧಿಯು ಡಿ.31ಕ್ಕೆ ಕೊನೆಗೊಂಡಿದೆ. ಆದ್ದರಿಂದ ಪ್ರಯಾಣಿಕರ ಹಿತದೃಷ್ಟಿಯಿಂದ ಈ ಪಾಸ್ಗಳ ಅವಧಿಯನ್ನು ಫೆ.28ರೊಳಗೆ ನವೀಕರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಇಂದಿನಿಂದ ಮೂತ್ರಪಿಂಡ ಉಚಿತ ತಪಾಸಣೆ
ಮಂಗಳೂರು: ಎ.ಜೆ. ಆಸ್ಪತ್ರೆ, ಸಂಶೋಧನಾ ಕೇಂದ್ರದಲ್ಲಿ ಉಚಿತ ಮೂತ್ರಪಿಂಡ ತಪಾಸಣಾ ಶಿಬಿರ 4ರಿಂದ 16ರ ವರೆಗೆ ನಡೆಯಲಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 12ರ ವರೆಗೆ ನಡೆಯಲಿದೆ. ಮೂತ್ರಪಿಂಡದಲ್ಲಿ ಕಲ್ಲು, ಪ್ರೋಸ್ಟೇಟ್ ಗ್ರಂಥಿಗೆ ಸಂಬಂಧಿಸಿದ ತೊಂದರೆಗಳು, ಮೂತ್ರಪಿಂಡ ವೈಫಲ್ಯತೆ, ಮೂತ್ರಪಿಂಡಕ್ಕೆ ಸಂಬಂಧಿತ ತೊಂದರೆ ಇದ್ದವರು 0824- 2225533ನ್ನು ಸಂಪರ್ಕಿಸಬಹುದು.
ಇಂದು ತರಬೇತಿ, ಪ್ರಾತ್ಯಕ್ಷಿಕೆ
ಮಂಗಳೂರು: ಮಂಗಳೂರು ಕೃಷಿ ವಿಜ್ಞಾನಕೇಂದ್ರದಲ್ಲಿ ಕೃಷಿ ನಿರತ ಮಹಿಳಾ ದಿನಾಚರಣೆ ಅಂಗವಾಗಿ ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕಾ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಫೆ.4ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಏರ್ಪಡಿಸಿದೆ. ಆಸಕ್ತ ರೈತರು/ರೈತ ಮಹಿಳೆಯರು ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘದ ಯುವತಿಯರು ಫೆ.3ರೊಳಗೆ ಮೊಬೈಲ್ 9008914009ನ್ನು ಸಂಪರ್ಕಿಸಬಹುದು. ಒಟ್ಟು 40 ಮಂದಿ ಶಿಬಿರಾರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಕೃಷಿ ವಿಜ್ಞಾನ ಕೇಂದ್ರ ಸಂಯೋಜಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

