ಸೌಜನ್ಯಾ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಲು ಆಗ್ರಹಿಸಿ 24 ಗಂಟೆ ಧರಣಿ
ಬೆಳ್ತಂಗಡಿ: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಆರೋಪಿಗಳನ್ನು ಬಂಧಿಸದೆ ಯಾರೋ ಅಮಾಯಕನನ್ನು ಬಂಧಿಸಿ ಇವನೇ ಕೊಲೆಗಾರ ಎಂದು ಪೊಲೀಸ್ ಇಲಾಖೆ ಹೇಳುತ್ತಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ಜನವಾದಿ ಮಹಿಳಾ ಸಂಘಟನೆಗಳ ರಾಜ್ಯ ಉಪಾಧ್ಯಾಕ್ಷೆ ಗೀತಾ ಆಗ್ರಹಿಸಿದ್ದಾರೆ.
ಸೋಮವಾರ ಬೆಳ್ತಂಗಡಿ ತಾಲೂಕು ಕಚೇರಿ ಮುಂದೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿನಿ ಸೌಜನ್ಯಾ ಆತ್ಯಾಚಾರ, ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ 24 ಗಂಟೆ ಹಗಲು- ರಾತ್ರಿ ಧರಣಿ ಸತ್ಯಾಗ್ರಹ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚೆಗೆ ಮಹಿಳೆಯರನ್ನು ಭೋಗದ ವಸ್ತುಗಳನ್ನಾಗಿ ನೋಡುವ ಪರಿಸ್ಥಿತಿ ಬಂದಿರುವುದು ಈ ದೇಶದ ರಾಜಕಾರಣಿಗಳಿಂದ. ದೇಶವನ್ನಾಳುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಹಿಳೆ ಆದರೂ ಮಹಿಳೆಯರ ದೌರ್ಜನ್ಯ, ಆತ್ಯಚಾರ ಬಗ್ಗೆ ಚಕಾರವೆತ್ತುತ್ತಿಲ್ಲ. ವಿರೋಧ ಪಕ್ಷದ ಅಧ್ಯಕ್ಷೆ ಕೂಡ ಮಹಿಳೆ. ಇವರೆಲ್ಲ ರಾಜಕೀಯ ಲಾಭಕ್ಕಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸೌಜನ್ಯಾ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು, ಇಲ್ಲವಾದರೆ ಮುಂದಿನ ಚುಣಾವಣೆಯಲ್ಲಿ ಜನಪರ ಸಂಘಟನೆಗಳು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ತಾಲೂಕು ದಲಿತ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಶೇಖರ ಲಾಯಿಲ ಪ್ರಸ್ತಾವಿಕವಾಗಿ ಮಾತಾನಾಡಿದರು. ಸಿಪಿಐಎಂ ಮುಖಂಡರಾದ ಬಿ.ಎಂ. ಭಟ್, ಶಿವಕುಮಾರ್ ಮುಂತಾದವರು ಮಾತನಾಡಿದರು.
ಪ್ರತಿಭಟನೆಯಲ್ಲಿ ದಲಿತ ಹಕ್ಕುಗಳ ಹೋರಾಟ ಸಮಿತಿಯ ಚಂದು ಎಲ್, ಸಂಜೀವ ಆರ್., ಬೆಳ್ತಂಗಡಿ ಗುತ್ತಿಗೆದಾರ ಸಂಘದ ಜನಾರ್ದನ ಬಂಗೇರ, ಚಂದಪ್ಪ ಗೌಡ, ಶೇಖರ ಕುಕ್ಕೇಡಿ, ವಸಂತ ಆರ್., ಪತ್ರಕರ್ತ ದೇವಿಪ್ರಸಾದ್, ಡಿವೈಎಫ್ಐ ತಾಲೂಕು ಅಧ್ಯಕ್ಷ ಲೋಕೇಶ್ ಕುದ್ಯಾಡಿ, ಕಾರ್ಯದರ್ಶಿ ಲಾರೆನ್ಸ್ ಕೈಕಂಬ, ಕೃಷ್ಣಪ್ಪ ತಂಕಕಾರಂದೂರು, ಸುಕನ್ಯ, ವಸಂತ ನಡ, ನಿಲೇಶ್ ಪೆರಿಂಜೆ, ನೆಬಿಸಾ, ಪಾಂಗಾಳ ಲಕ್ಷ್ಮಣ ಗೌಡ, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

