ದಕ್ಷಿಣ ಕನ್ನಡ

ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ ಉದ್ಘಾಟನೆ

Published On :

ಪುತ್ತೂರು: ನಾಟಕಗಳು ಶೈಕ್ಷಣಿಕವಾಗಿ ಹಾಗೂ ಮನೋರಂಜನಾತ್ಮಕವಾಗಿ ಪ್ರೇಕ್ಷಕರನ್ನು ತಲುಪುವ ಪ್ರಬಲ ಮಾಧ್ಯಮ ಎಂದು ಹಿರಿಯ ಪತ್ರಕರ್ತ ಪ್ರೊ.ವಿ.ಬಿ. ಅರ್ತಿಕಜೆ ಅಭಿಪ್ರಾಯಪಟ್ಟರು.
ಅವರು ಬುಧವಾರ ಪುತ್ತೂರಿನ ಪುರಭವನದಲ್ಲಿ ಆರಂಭಗೊಂಡ ನಿರತನಿರಂತ ಪುತ್ತೂರು ಹಾಗೂ ಬಹುವಚನಂ ಆಯೋಜನೆಯ ಹತ್ತನೇ ವರ್ಷದ ಪ್ರೇಮಾಕಾರಂತ ನೆನಪಿನ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಟ್ಟಾಮುಟ್ಟಾ ನಾಟಕೋತ್ಸವವನ್ನು  ಪುತ್ತೂರು ಪೂರ್ವದ ರೋಟರಿ ಕ್ಲಬ್ ಅಧ್ಯಕ್ಷ ಹರೀಶ್ ಪುತ್ತೂರಾಯ ಉದ್ಘಾಟಿಸಿದರು.
ಮುಖ್ಯಅತಿಥಿಯಾಗಿ ಆಗಮಿಸಿದ್ದ ಹಿರಿಯ ರಂಗಕರ್ಮಿ ಕೆ.ಜಿ. ಕೃಷ್ಣಮೂರ್ತಿ ಮಾತನಾಡಿ, ಯಾವುದೇ ಸಂಸ್ಥೆಯ ನಿರಂತರ ಚಟುವಟಿಕೆಗಳು ಅವುಗಳ ಬದ್ಧತೆಯನ್ನು, ಜವಬ್ದಾರಿಯನ್ನು ಹೆಚ್ಚಿಸುತ್ತದೆ ಎಂದರು.  ಬಹುವಚನಂನ ಡಾ. ಶ್ರೀಶ ಕುಮಾರ್ ವೇದಿಕೆಯಲ್ಲಿ ಇದ್ದರು.
ನಿರತನಿರಂತದ ಐಕೆಬೊಳುವಾರು ಸ್ವಾಗತಿಸಿ, ಪ್ರಸ್ತಾಪಿಸಿದರು. ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ವಂದಿಸಿದರು. ಪತ್ರಕರ್ತ ಸಂಶುದ್ದೀನ್ ಸಂಪ್ಯ ಕಾರ್ಯಕ್ರಮ ನಿರ್ವಹಿಸಿದರು.
ಉದ್ಘಾಟನಾ ಸಮಾರಂಭದ ಬಳಿಕ ರಾಮಕೃಷ್ಣ ಪ್ರೌಢಶಾಲಾ ಮಕ್ಕಳ ಸೇವ್ ವಾಟರ್ ಹಾಗೂ ಕಿನ್ನರ ಮೇಳ ತುಮರಿ ತಂಡದ ಸುಶೀಲಾ ಕೆಳಮನೆ ಅಭಿನಯದ 'ಗಿರಿಬಾಲೆ' ನಾಟಕ ಪ್ರದರ್ಶನಗೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.