ದಕ್ಷಿಣ ಕನ್ನಡ

ಗುತ್ತಿಗಾರು: ಇಂದು ಕೃಷಿ ಉತ್ಸವ

Published On :

ಸುಬ್ರಹ್ಮಣ್ಯ: ಸುಳ್ಯ ತಾಲೂಕು ಮಟ್ಟದ ಕೃಷಿ ಉತ್ಸವ ಭಾನುವಾರ ಗುತ್ತಿಗಾರಿನ ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ನಡೆಯಲಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜತೆ ಸುಳ್ಯ- ಮಡಿಕೇರಿ ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ, ಗುತ್ತಿಗಾರು ವಲಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಗುತ್ತಿಗಾರು ಗ್ರಾಮ ಪಂಚಾಯಿತಿ, ಗುತ್ತಿಗಾರು ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ವತಿಯಿಂದ ಈ ಉತ್ಸವ ನಡೆಯಲಿದೆ.
70 ಮಳಿಗೆಗಳು: ಕೃಷಿ ಉತ್ಸವದಲ್ಲಿ 70 ವಿವಿಧ ಬಗೆಯ ಮಳಿಗೆಗಳನ್ನು ತೆರೆಯಲಾಗಿದೆ. ಇತಿಹಾಸ ಸೇರುತ್ತಿರುವ ಹಳ್ಳಿಮನೆ ಸೇರಿದಂತೆ ವಿವಿಧ ತಳಿಯ ಜಾನುವಾರು ಪ್ರದರ್ಶನ, ಕುಕ್ಕುಟ ಪ್ರದರ್ಶನ ಏರ್ಪಡಿಸಲಾಗಿದೆ. ವಿವಿಧ ವಿಷಯಗಳ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಕೃಷಿ ಉತ್ಸವವನ್ನು ಪ್ರಗತಿಪರ ಕೃಷಿಕ ಬಿ.ಕೆ. ಬೆಳ್ಯಪ್ಪ ಗೌಡ ಉದ್ಘಾಟಿಸಲಿದ್ದಾರೆ. ಸುಳ್ಯ ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್, ಜಿ.ಪಂ ಸದಸ್ಯ ಕೆ.ಎಸ್. ದೇವರಾಜ್, ಮುಳಿಯ ಕೇಶವ ಭಟ್, ಎ.ವಿ ತೀರ್ಥರಾಮ, ನಿತ್ಯಾನಂದ ಮುಂಡೋಡಿ ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭವು ವೆಂಕಟ್ ವಳಲಂಬೆ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು, ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲೆಯ ನಿರ್ದೇಶಕ ಪಿ. ರಾಧಾಕೃಷ್ಣ ರಾವ್, ತಾಪಂ ಅಧ್ಯಕ್ಷೆ ಗುಣವತಿ ಕೊಲ್ಲಂತ್ತಡ್ಕ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಜಯರಾಮ ಹಾಡಿಕಲ್, ತಹಸೀಲ್ದಾರ್ ಎಚ್.ವಿ. ವೈಧ್ಯನಾಥ್ ಮುಂತಾದ ಗಣ್ಯರು ಉಪಸ್ಥಿತರಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.