ಕಳ್ಳತನ ಪ್ರಕರಣ: ಇಬ್ಬರ ಬಂಧನ
ಬಂಟ್ವಾಳ: ವಾಮದಪದವು ಸಮೀಪದ ಪಿಲಿಮೊಗರು ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ಇಬ್ಬರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಬಂಧಿತರನ್ನು ವಾಸು ಹಾಗೂ ಶಿವಾನಂದ ಎಂದು ಹೆಸರಿಸಲಾಗಿದೆ. ಇವರಿಬ್ಬರು ಸ್ಥಳೀಯ ಕೆಲವು ಮಂದಿಯ ತೋಟದಿಂದ ಅಡಕೆ ಮತ್ತು ತೆಂಗಿನಕಾಯಿಗಳನ್ನು ಕಳವುಗೈದ ಬಗ್ಗೆ ದೂರು ನೀಡಲಾಗಿತ್ತು.
ಕಾಲು ಜಾರಿ ನೀರಿಗೆ ಬಿದ್ದು ಯುವಕ ಸಾವು
ಬಂಟ್ವಾಳ: ಶಂಭೂರು ಗ್ರಾಮದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ನೇತ್ರಾವತಿ ನದಿಗೆ ಸ್ನಾನಕ್ಕೆಂದು ತೆರಳಿದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ನರಿಕೊಂಬು ಗ್ರಾಮದ ಕರ್ಬೆಟ್ಟು ನಿವಾಸಿ ದಿ. ಜಯಂತ ಸಪಲ್ಯ ಎಂಬವರ ಪುತ್ರ ವಸಂತ (23) ಮೃತಪಟ್ಟ ಯುವಕ. ಈತ ವೃತ್ತಿಯಲ್ಲಿ ಪೈಂಟರ್ ಆಗಿದ್ದಾನೆ. ಶನಿವಾರ ಶಂಭೂರು ಗ್ರಾಮದ ಪರೇಲ್ನಲ್ಲಿರುವ ತನ್ನ ಭಾವ ಸಚಿನ್ ಅವರ ಮನೆಗೆ ತೆರಳಿದ್ದು, ಅಲ್ಲಿಂದ ಭಾವ ಸಚಿನ್, ಕರ್ಬೆಟ್ಟು ನಿವಾಸಿ, ಸ್ನೇಹಿತ ರಾಜೇಶ್ ಜೊತೆ ಭಾನುವಾರ ಮಧ್ಯಾಹ್ನ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ನೇತ್ರಾವತಿ ನದಿಗೆ ಸ್ನಾನಕ್ಕೆ ತೆರಳಿದ್ದರು. ಈ ಸಂದರ್ಭ ವಸಂತ ಬಂಡೆಯ ಮೇಲಿಂದ ಕಾಲು ಜಾರಿ ನೀರಿಗೆ ಬಿದ್ದು, ಮುಳುಗಿ ಮೃತಪಟ್ಟನು. ತಕ್ಷಣ ಸ್ಥಳೀಯರ ನೆರವಿನೊಂದಿಗೆ ಮೃತದೇಹವನ್ನು ಮೇಲಕೆತ್ತಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ತರಲಾಯಿತು. ಘಟನೆಯ ಬಗ್ಗೆ ಬಂಟ್ವಾಳ ಗ್ರಾಮಂತರ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮಾಜಿ ಶಾಸಕ ಪದ್ಮಾನಾಭ ಕೊಟ್ಟಾರಿ, ತಾ.ಪಂ. ಉಪಾಧ್ಯಕ್ಷ, ಆನಂದ ಶಂಭೂರು, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ ಮತ್ತಿತರರು ಮೃತರ ಮನೆಗೆ ತೆರಳಿ ಮನೆ ಮಂದಿಗೆ ಸಾಂತ್ವನ ಹೇಳದರು. ಮೃತ ವಸಂತ ನರಿಕೊಂಬು ಗ್ರಾ.ಪಂ. ಸದಸ್ಯ ಯಶೋಧರ ಅವರ ಸಹೋದರ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

