ದಕ್ಷಿಣ ಕನ್ನಡ

ಟರ್ಬೈನರ್ ಸ್ಥಗಿತ: ತಾತ್ಕಾಲಿಕ ಕಟ್ಟ ನಿರ್ಮಾಣಕ್ಕೆ ಸೂಚನೆ

Published On :

ಮಂಗಳೂರು: ಬೆಳ್ತಂಗಡಿಯ ಇಂದಬೆಟ್ಟು ಗ್ರಾಮ ಪಂಚಾಯ್ತಿಯ ಕುದ್ಕೊಳಿಯಲ್ಲಿ ಸ್ಥಗಿತಗೊಂಡ ಟರ್ಬೈನರ್‌ನ್ನು ಮತ್ತೆ ಚಾಲೂಗೊಳಿಸುವ ನಿಟ್ಟಿನಲ್ಲಿ ಹೊಳೆಗೆ ತಾತ್ಕಾಲಿಕ ಕಟ್ಟ ನಿರ್ಮಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಿಜಯಪ್ರಕಾಶ್ ಜಲಾನಯ ಇಲಾಖೆಗೆ ಸೂಚಿಸಿದ್ದಾರೆ. ಜಿಲ್ಲಾಡಳಿತ ಕಳೆದ ವರ್ಷ ಇಲ್ಲಿ 5 ಮಂದಿ ಮಲೆಕುಡಿಯರ ಮನೆಗಳಿಗೆ ನಕ್ಸಲ್ ಪ್ಯಾಕೇಜ್‌ನಲ್ಲಿ ಜಲವಿದ್ಯುತ್ ಯೋಜನೆಯನ್ನು ಕಾರ್ಯಗತಗೊಳಿಸಿತ್ತು. ಆದರೆ ಹರಿಯುವ ನೀರು ಸಂಗ್ರಹಕ್ಕೆ ಸರಿಯಾದ ವ್ಯವಸ್ಥೆ ಇಲ್ಲದ ಪರಿಣಾಮ ಜನವರಿಯಲ್ಲೇ ನೀರಿನ ಕೊರತೆ ತಲೆದೋರಿ ಟರ್ಬೈನರ್ ಸ್ಥಗಿತಗೊಂಡಿತ್ತು. ಈ ಬಗ್ಗೆ ಫೆ.8ರಂದು 'ಕನ್ನಡಪ್ರಭ' ವಿಶೇಷ ವರದಿಯನ್ನು ಪ್ರಕಟಿಸಿತ್ತು. ಈ ವರ್ಷದ ಮಟ್ಟಿಗೆ ಮಣ್ಣಿನ ಕಟ್ಟವನ್ನು ನಿರ್ಮಿಸುವಂತೆ ಸೂಚಿಸಲಾಗಿದೆ. ಮುಂದಿನ ವರ್ಷ ಕಿಂಡಿ ಅಣೆಕಟ್ಟೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ತಕ್ಷಣದಲ್ಲಿ ಕಟ್ಟ ನಿರ್ಮಿಸಲು ತ್ವರಿತ ಕ್ರಮಕೈಗೊಳ್ಳುವಂತೆ ಜಲಾನಯನ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಇಒ ಡಾ.ವಿಜಯ ಪ್ರಕಾಶ್ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.
ಒಂಬುಡ್ಸ್‌ಮನ್ ಸ್ಪಂದನ: ನೀರು ಸಂಗ್ರಹಕ್ಕೆ ಪರ್ಯಾಯ ವ್ಯವಸ್ಥೆಯಾಗಿ ಮಣ್ಣಿನಿಂದ ಕಟ್ಟ ನಿರ್ಮಿಸುವಂತೆ ಒಂಬುಡ್ಸ್‌ಮನ್ ಶೀನ ಶೆಟ್ಟಿ ಸಲಹೆ ಮಾಡಿದ್ದಾರೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಕಟ್ಟ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.