ದಕ್ಷಿಣ ಕನ್ನಡ

ಹೋರಾಟಕ್ಕೆ ಬೆಂಬಲ

Published On :

ಮೂಲ್ಕಿ: ಮೂಲ್ಕಿ ತಾಲೂಕು ಮತ್ತು ನ್ಯಾಯಾಲಯ ಹೋರಾಟ ಸಮಿತಿ ನೇತೃತ್ವದಲ್ಲಿ ಮೂಲ್ಕಿ ತಾಲೂಕು ರಚನೆಗೆ ಆಗ್ರಹಿಸಿ ಸ್ಥಳೀಯ ಬಸ್ ನಿಲ್ದಾಣದಲ್ಲಿ ಮೂರು ದಿನಗಳ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ಇದಕ್ಕೆ ಪೂರಕವಾಗಿ ಮೂಲ್ಕಿಯ ಕೆ.ಎಸ್. ರಾವ್ ನಗರದ ಮಾದಿಗ ದಾಂಡೋರ ಮೀಸಲು ಹೋರಾಟ ಸಮಿತಿ ಸದಸ್ಯರು ಕೆ.ಎಸ್. ರಾವ್ ನಗರದಿಂದ ಮೂಲ್ಕಿ ಬಸ್ಸು ನಿಲ್ದಾಣವರೆಗೆ ತಮಟೆ ಬಾರಿಸಿ ಪಾದಯಾತ್ರೆ ನಡೆಸಿ ಧರಣಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು. ಸಮಿತಿ ಅಧ್ಯಕ್ಷ ಮಂಜುನಾಥ ಆರ್.ಕೆ, ಉಪಾಧ್ಯಕ್ಷ ಆಶೋಕ ಪೂಜಾರ ಇದ್ದರು.
  ದ.ಕ. ಜಿಲ್ಲಾ ಫೋಟೋಗ್ರಾಫರ್ಸ್ ಎಸೋಸಿಯೇಶನ್‌ನ ಮೂಲ್ಕಿ ವಲಯವು ಮೂಲ್ಕಿ ತಾಲೂಕು ರಚನೆಗೆ ಬೆಂಬಲ ವ್ಯಕ್ತಪಡಿಸಿದ್ದು, ಶೀಘ್ರದಲ್ಲಿ ಮೂಲ್ಕಿ ತಾಲೂಕು ರಚನೆ ಆಗಬೇಕೆಂದು ಮೂಲ್ಕಿ ವಲಯದ ಕಾರ್ಯದರ್ಶಿ ಯಶವಂತ್ ಐಕಳ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.