ಇಂದು ಸಿದ್ಧವೀರ ಮಹಾಸ್ವಾಮಿ ಭೇಟಿ
ಕುಂದಾಪುರ: ಸಾಗರ ತಾಳಗುಪ್ಪ ಕೂಡ್ಲಿ ಬಾರಂಗಿ ಮಹಾಸಂಸ್ಥಾನ ಮಠದ ವಿದ್ವಾನ್ ಸಿದ್ಧವೀರ ಮಹಾಸ್ವಾಮಿಗಳು ಫೆ.14ರಂದು ಸಂಜೆ 4 ಗಂಟೆಗೆ ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ದೇವಳದಲ್ಲಿ ನಡೆಯಲಿರುವ ಧಾರ್ಮಿಕ ಸಮಾರಂಭ, ಶಿಕ್ಷಕದ್ವಯರಿಗೆ ಸನ್ಮಾನ ಹಾಗೂ ಶಾಲಾ ವಾಚನಾಲಯಗಳಿಗೆ ಪುಸ್ತಕ ವಿತರಣೆ ಸಮಾರಂಭದಲ್ಲಿ ಶ್ರೀಗಳು ಆಶೀರ್ವಚನ ನೀಡಲಿದ್ದಾರೆ.
ನಾಳೆ ಬೆಳ್ಳಿಹಬ್ಬ ಸಮಾರೋಪ
ಕುಂದಾಪುರ: ಶ್ರೀ ವೆಂಕಟರಮಣ ದೇವ ಎಜ್ಯುಕೇಶನಲ್ ಮತ್ತು ಕಲ್ಚರಲ್ ಟ್ರಸ್ಟ್ನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭ ಫೆ.15 ರಂದು ನಡೆಯಲಿದೆ. ಇನ್ಫೋಸಿಸ್ ಮತ್ತು ಐಸಿಐಸಿಐ ಬ್ಯಾಂಕಿನ ಮುಖ್ಯಸ್ಥ ಕೆ.ವಿ. ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲ ಗ್ಲೋಬಲ್ ಎಜ್ಯುಕೇಶನ್ ಸರ್ವೀಸ್ನ ಮುಖ್ಯಸ್ಥ ಟಿ.ವಿ. ಮೋಹನದಾಸ ಪೈ, ಮಂಗಳೂರು ಗಣೇಶ್ ಬೀಡಿ ವರ್ಕರ್ಸ್ನ ಆಡಳಿತ ಪಾಲುದಾರ ಜಗನ್ನಾಥ ಶೆಣೈ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಲೆಯ ಸಂಚಾಲಕ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

