ದಕ್ಷಿಣ ಕನ್ನಡ

ನಾಯಕವಾಡಿ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿಂದು ಲಕ್ಷ ಬಿಲ್ವಾರ್ಚನೆ

Published On :

ಕುಂದಾಪುರ: ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಶ್ರೀದೇವರ ಪ್ರತಿಷ್ಠಾ ದಶಮಾನೋತ್ಸವದ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ಲಕ್ಷ ಬಿಲ್ವಾರ್ಚನೆ ಸೇವೆ ಫೆ.14ರಂದು ಹೊಸನಗರ ಮೂಲೆಗದ್ದೆ ಶ್ರೀ ಸದಾನಂದಾಶ್ರಮದ ಸಿದ್ಧಲಿಂಗ ಮಹಾಸ್ವಾಮಿ ಮತ್ತು ಸಾಗರ ತಾಳಗುಪ್ಪ ಕೂಡ್ಲಿ ಬಾರಂಗಿ ಮಹಾಸಂಸ್ಥಾನ ಮಠದ ವಿದ್ವಾನ್ ಸಿದ್ಧವೀರ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.
ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಧರ್ಮ ಸಭಾ ಕಾರ್ಯಕ್ರಮವನ್ನು ಹೊಸನಗರ ಮೂಲೆಗದ್ದೆ ಶ್ರೀ ಸದಾನಂದಾಶ್ರಮದ ಸಿದ್ಧಲಿಂಗ ಮಹಾಸ್ವಾಮೀಜಿಯವರು ಉದ್ಘಾಟಿಸಲಿದ್ದಾರೆ.
 ಸಾಗರ ತಾಳಗುಪ್ಪ ಕೂಡ್ಲಿ ಬಾರಂಗಿ ಮಹಾಸಂಸ್ಥಾನ ಮಠದ ಸಿದ್ಧವೀರ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.
 ಈಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಬಿ. ಅಪ್ಪಣ್ಣ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ಅಮ್ಮನವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಡಾ. ವಿಜಯ ಬಲ್ಲಾಳ್, ಸಂಸದ ಬಿ.ವೈ. ರಾಘವೇಂದ್ರ, ಬೈಂದೂರು ಶಾಸಕ ಕೆ. ಲಕ್ಷ್ಮೀನಾರಾಯಣ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.