'ಕುಲಪತಿ ಹುದ್ದೆಗೆ ಪೇಮೆಂಟ್': ವಿಷಾದ
ಮಂಗಳೂರು: 'ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗಳು ಪೇಮೆಂಟ್ ಮುಖಾಂತರ ನಡೆಯುತ್ತಿದೆ' ಎಂದು ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಪ್ರಸ್ತಾಪಿಸುತ್ತಿರುವುದು ವಿಷಾದನೀಯ. ಇದರಿಂದ ಉತ್ತಮ ಶಿಕ್ಷಕರೂ ಅವಮಾನ ಪಡುವಂತಾಗಿದೆ ಎಂದು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ 'ಕನಕ ಗಂಗೋತ್ರಿ' ಕೀರ್ತನೆಗಳ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಘಟನೆಯಿಂದ ವಿದ್ಯಾಲಯಕ್ಕೆ ಬರಲು ಯೋಚಿಸುವಂತಾಗಿದೆ. ಒಳ್ಳೆಯ ಕುಲಪತಿ ಇದ್ದಾಗ ವಿಶ್ವವಿದ್ಯಾಲಯದ ವಾತಾವರಣ ಚೆನ್ನಾಗಿರುತ್ತದೆ. ಶಿಕ್ಷಣದ ಗುಣಮಟ್ಟದ ಕೊರತೆ ಸಮಾಜದಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳಿಗೆ ಕಾರಣ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

