ವಿಟ್ಲ ಅಧ್ಯಾಪಕರ ಸಹಕಾರಿ ಸಂಘ ಕಟ್ಟಡ ಉದ್ಘಾಟನೆ
ವಿಟ್ಲ: ಅಧ್ಯಾಪಕರು ವಿದ್ಯಾರ್ಥಿಗಳನ್ನು ಸತ್ಪ್ರಜೆಯನ್ನಾಗಿ ಮಾಡಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.
ವಿಟ್ಲ ಅಧ್ಯಾಪಕ ಸಹಕಾರಿ ಸಂಘದ ನೂತನ ಸಹಕಾರ ಸೌಧದ ಸ್ವಂತ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿ, ಅಧ್ಯಾಪಕರ ಸಹಕಾರ ಸಂಘಕ್ಕೆ ರು. 2 ಲಕ್ಷ ಕೊಡುಗೆ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ಬಿ. ರಮಾನಾಥ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕ್ಯಾಂಪ್ಕೊ ಅಧ್ಯಕ್ಷ ಪದ್ಮನಾಭ ಕೊಂಕೋಡಿ ಸಂಘದ ಭದ್ರತಾ ಕೊಠಡಿ ಉದ್ಘಾಟಿಸಿದರು.
ಅಧ್ಯಾಪಕ ಸಹಕಾರಿ ಸಂಘದ ಜನರಲ್ ಮ್ಯಾನೇಜರ್ ಕೃಷ್ಣ ಪ್ರಕಾಶ್, ವಿನ್ಯಾಸ ಕನ್ಸ್ಟ್ರಕ್ಶನ್ನ ಎಂಜಿನಿಯರ್ ಕಿಶೋರ್ ಕುಮಾರ್ ಹಾಗೂ ವಾಸ್ತುಶಿಲ್ಪಿ ಸುಬ್ರಹ್ಮಣ್ಯ ಪ್ರಕಾಶ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷೆ ಕೆ.ಟಿ. ಶೈಲಜಾ ಭಟ್ ಬ್ಯಾಂಕಿನ ಹೊಸ ಯೋಜನೆಯ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಲಲಿತಾ ಶಿವಪ್ಪ ನಾಯ್ಕ್, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಅಧ್ಯಾಪಕ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ಈಶ್ವರ ಭಟ್, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಲ್.ಎನ್. ಕೂಡೂರು, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ ಕೆ., ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜಗನ್ನಾಥ್ ಸಾಲಿಯಾನ್, ಅಧ್ಯಾಪಕ ಸಹಕಾರಿ ಸಂಘದ ಉಪಾಧ್ಯಕ್ಷ ಡಾ. ಸಿದ್ಧರಾಜು ಎಂ., ಜನರಲ್ ಮ್ಯಾನೇಜರ್ ಕೃಷ್ಣ ಪ್ರಕಾಶ್ ಇದ್ದರು.
ರಾಮಚಂದ್ರ ರಾವ್ ಗೂಡಿನಬಳಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಅಧ್ಯಕ್ಷ ಕೆ. ರಮೇಶ ನಾಯಕ್ ಸ್ವಾಗತಿಸಿದರು. ನಿರ್ದೇಶಕ ಹರಿಶ್ಚಂದ್ರ ಜೈನ್ ವಂದಿಸಿದರು. ಜ್ಯೋತಿ ಪ್ರಾರ್ಥಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

